
ಹುಬ್ಬಳ್ಳಿ: ಬುಧುವಾರ ನಡೆದ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರಂಭವಾಗುವ 114 ‘ನಮ್ಮ ಕ್ಲಿನಿಕ್ ಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ನಂತರ ಉತ್ತರ ಕನ್ನಡ, ರಾಯಚೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು.
“ಒಮ್ಮೆ ಆರಂಭವಾದ ಮೇಲೆ ‘ನಮ್ಮ ಕ್ಲಿನಿಕ್’ ನಿಲ್ಲಬಾರದು, ಅಗತ್ಯ ಸಂಪನ್ಮೂಲಗಳನ್ನು ನೀಡಲಾಗಿದೆ. ಯಾವುದೇ ಬೇಡಿಕೆಗಳಿದ್ದರೆ ತಿಳಿಸಿ ಮುಂದಿನ ದಿನಗಳಲ್ಲಿ ನಮ್ಮ ಕ್ಲಿನಿಕ್ ಗಳಲ್ಲಿ ನೀಡಲು ಉದ್ದೇಶಿಸಿರುವ ಈಗಿನ 14 ಸೇವೆಗಳ ಜೊತೆಗೆ ಬಡವರಿಗೆ ತೀರಾ ಅಗತ್ಯವಿರುವ ಇನ್ನಷ್ಟು ಸೇವೆಗಳನ್ನು ಸೇರ್ಪಡೆ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗುವುದು ಎಂದರು.