
ಬೆಂಗಳೂರು: ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮಾಡೆಲ್ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಅದ್ಧೂರಿಯಾಗಿ ನಡೆದಿದೆ. ಆಪ್ತ ವಲಯದ ಸಮ್ಮುಖದಲ್ಲಿ ಎಂಗೇಜ್ಮೆಂಟ್ ನಡೆದಿದ್ದು, ನಟಿ, ಸಂಸದೆ ಸುಮಲತಾ ಅಂಬರೀಶ್, ನಟ ದರ್ಶನ್, ರಾಕಿಂಗ್ ಸ್ಟಾರ್ ಯಶ್, ನಟಿ ರಾಧಿಕಾ ಪಂಡಿತ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ, ಸಚಿವರಾದ ಆರ್.ಅಶೋಕ್, ಅಶ್ವಥ್ ನಾರಾಯಣ ಸೇರಿದಂತೆ ಗಣ್ಯರು ಭಾಗಿಯಾಗಿ ಶುಭಕೋರಿದರು.



