ಕರಾವಳಿ: ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಎಲ್ಲೂ ಅಲರ್ಟ್ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೋಮವಾರದಿಂದ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆಗಸ್ಟ್ 22 ಮತ್ತು 23 ರಂದು ಯಾವುದೇ ಮುನ್ಸೂಚನೆ ನೀಡಿಲ್ಲ. ಆದರೆ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ.
ಭಾನುವಾರ ಉಡುಪಿಯಲ್ಲಿ 11 ಸೆ, ಮೀ, ಕೋಟ ಮತ್ತು ಕಾರ್ಕಳದಲ್ಲಿ ತಲಾ 8ಸೇ, ಮಿ, ಉತ್ತರ ಕನ್ನಡ ಜಿಲ್ಲೆಯ ನಿಲ್ಕಂದು ದಲ್ಲಿ 6ಸೇ ಮಿ, ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 5 ಸೆ,ಮೀ, ಮಳೆಯಾಗಿದೆ.