ಕ. ರಾ. ವಿ. ಪ. ಇಂದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ.

ಚಿತ್ರದುರ್ಗ : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಸಹಯೋಗದಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಚಿತ್ರದುರ್ಗದ ಡಾನ್ ಬಾಸ್ಕೋ ಶಾಲೆಯ 10ನೇ ತರಗತಿ ವಿದ್ಯಾರ್ಥಿಯ ಮೊಹಮ್ಮದ್ ಫಾವಾನ ಮತ್ತು ಹರ್ಷ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ನಾನ ಪ್ರೌಢಶಾಲೆಗಳಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಡಯಟ್ ಉಪನ್ಯಾಸಕ ಜಿ. ಎಸ್. ನಿತ್ಯಾನಂದ ಮಾತನಾಡಿ, ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಯಂತಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರೆ ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯುತ್ತದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರಶ್ನೆ ಕೇಳುವುದರ ಮೂಲಕ ತಮ್ಮಲಿನ ಪ್ರತಿಭೆಯನ್ನು ಪ್ರದರ್ಶಿಸಬೇಕಿದೆ. ಶಿಕ್ಷಕರ ಸಹಾಯದಿಂದ ವಿಜ್ಞಾನ ಕರಿಯಲು ಆಸಕ್ತಿ ಬೆಳೆಸಿಕೊಳ್ಳಿ ಎಂದರು.

ಕ. ರಾ.ವಿ. ಪಿ. ರಾಜ್ಯ ಸಮಿತಿ ಸದಸ್ಯ ಹೆಚ್‌ ಎಸ್‌ ಟಿ ಸ್ವಾಮಿ ಮಾತನಾಡಿ ಪ್ರಥಮ ಸ್ಥಾನ ಪಡೆದ ತಂಡ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧಿಯಲ್ಲಿ ಭಾಗವಹಿಸಬಹುದು ಎಂದರು.

ಕ ರಾ ವಿ ಪಿ ಜಿಲ್ಲಾಧ್ಯಕ್ಷ ಎಂ ಡಿ ಲತೀಫ್ ಸಾಬ್ ಅಧ್ಯಕ್ಷತೆ ವಹಿಸಿದ್ದರು. ಚಳ್ಳಕೆರೆ ಯರ್ರಿಸ್ವಾಮಿ, ಶಿಕ್ಷಣ ಇಲಾಖೆ ವಿಜ್ಞಾನ ವಿಷಯ ಪರಿವೀಕ್ಷಕ ಎಚ್. ಗೋವಿಂದಪ್ಪ, ಬಸವರಾಜು, ಕ್ವಿಜ್ ಮಾಸ್ಟರ್ ಬಸವಂತ್ ಕುಮಾರ್ , ಕಾರ್ಯಕ್ರಮ ಸಂಯೋಜಕ ಹಾಲೇಶ್, ಕಾರ್ಯದರ್ಶಿ ಮಹೇಶ್, ಮಂಜುನಾಥ ಮತ್ತಿತರರಿದ್ದರು.

Leave a Reply

Your email address will not be published. Required fields are marked *