
ಚಿತ್ರದುರ್ಗ, (ಫೆ.05) : ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಭಾನುವಾರ ಮುಂಜಾನೆ ಸುಮಾರು ಎರಡು ಗಂಟೆ ಸಮಯದಲ್ಲಿ ನಡೆದಿದೆ.
ನಗರದ ಸಾಯಿಬಾಬಾ ದೇವಸ್ಥಾನದ ಎದುರು ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು, ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನೆಗೆ ಅವೈಜ್ಞಾನಿಕವಾಗಿ ನಿರ್ಮಾಣವಾದ ರಸ್ತೆ ವಿಭಜಕ ಕಾರಣ ಎನ್ನಲಾಗಿದೆ.
ವಿಷಯ ತಿಳಿಯಕೂಡಲೇ ಗಸ್ತು ತಿರುಗುತ್ತಿದ್ದ ಪೊಲೀಸರು ಮತ್ತು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The post ಚಿತ್ರದುರ್ಗ : ನಗರದ ಮಧ್ಯ ಭಾಗದಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಲಾರಿ… first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/U38q4vw
via IFTTT