
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಫೆ.04) : ನಾಯಕನಹಟ್ಟಿ ಜಾತ್ರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 200 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ
ಎಂದು ಸಚಿವ ಶ್ರೀರಾಮುಲು ಹೇಳಿದರು.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ದೊಡ್ಡ ರಥೋತ್ಸವದ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ, ಚಳ್ಳಕೆರೆ, ಬಳ್ಳಾರಿ, ದಾವಣಗೆರೆ ನಗರಗಳಿಂದ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ. ಚಿತ್ರದುರ್ಗ 100, ದಾವಣಗೆರೆ 50, ಬಳ್ಳಾರಿಯಿಂದ 30 ಬಸ್‍ಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದರು.
ಸರ್ಕಾರಿ ಬಸ್‍ಗಳ ಜೊತೆ ಖಾಸಗಿ ಬಸ್‍ಗಳ ಓಡಾಟಕ್ಕೂ ಅನುವು ಮಾಡಿಕೊಡಲಾವುದು ಎಂದು ಸಚಿವ ಶ್ರೀರಾಮುಲು ಹೇಳಿದರು.
The post ನಾಯಕನಹಟ್ಟಿ ಜಾತ್ರಾ ಮಹೋತ್ಸವಕ್ಕೆ 200 ವಿಶೇಷ ಬಸ್ : ಸಚಿವ ಶ್ರೀರಾಮುಲು first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/86FamGJ
via IFTTT