
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರರೇತರ ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಾಯರ ಸಂಘದ ವತಿಯಿಂದ ಇದೇ ಫೆಬ್ರವರಿ 8ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ವಸಂತನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯಾಗಾರ ಹಾಗೂ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಾಗಾರದಲ್ಲಿ ಶಿಕ್ಷಣ ಸಚಿವರು ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸಂಘದಿಂದ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲಾಗುವುದು.
ಕಾರ್ಯಾಗಾರದಲ್ಲಿ ಭಾಗವಹಿಸುವ ಮುಖ್ಯ ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ ದೊರಕಲಿದೆ. ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಬಡ್ತಿ ಮುಖ್ಯ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಪ್ರಕಾಶ್ ಮನವಿ ಮಾಡಿದ್ದಾರೆ.
The post ಫೆಬ್ರವರಿ 8 ಕ್ಕೆ ಶೈಕ್ಷಣಿಕ ಕಾರ್ಯಾಗಾರ, ಬಿ.ಎಸ್.ಯಡಿಯೂರಪ್ಪ ಅವರಿಂದ ಕಾರ್ಯಕ್ರಮ ಉದ್ಘಾಟನೆ : ಮುಖ್ಯ ಶಿಕ್ಷಕರಿಗೆ ಒ.ಒ.ಡಿ ಸೌಲಭ್ಯ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/b9DyZFm
via IFTTT
Views: 0