
ಬೆಂಗಳೂರು: ಮ್ಯಾಂದೋಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ರಾಜ್ಯದ ವಿವಿಧಡೆ ಅಧಿಕ ಮಳೆಯಾಗಿದ್ದು, ಕೆಲವು ಕಡೆ ಜಿಟಿ ಜಿಟಿ ಮಳೆಯಾಗಿದೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಗಣನೀಯವಾಗಿ ಇಳಿಕೆಯಾಗಿತ್ತು. ಕಳೆದ ವಾರ ಹಿಂಗಾರು ಮಳೆ ಕ್ಷೀಣ ಹಾಗೂ ಬಿಸಿಲು ವಾತಾವರಣವಿದ್ದ ಪರಿಣಾಮ ಹೆಚ್ಚಾಗಿದ್ದ ಚಳಿ ಕಡಿಮೆಯಾಗಿತ್ತು.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕಡಿಮೆ ಉಷ್ಣಾಂಶ ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 24 ಗಂಟೆಗಳ ಕಾಲ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಲಿದ್ದು, ಈ ವೇಳೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ 23 ಕನಿಷ್ಠ 13 ಡಿ. ಸೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ.
ಮ್ಯಾಂದೊಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಗಿಂತ ದಕ್ಷಿಣ ಒಳನಾಡು ಹಾಗೂ ಮಲೆ ನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಮಧ್ಯೆ ತಮಿಳುನಾಡು- ಆಂಧ್ರಪ್ರದೇಶ ಕರಾವಳಿ ತೀರದಲ್ಲಿ ತೀವ್ರ ಆತಂಕ ಸೃಷ್ಟಿಸಿದ ಮ್ಯಾಂದೋಸ್ ಚಂಡಮಾರುತದ ಅಬ್ಬರ ಭಾನುವಾರದ ವೇಳೆಗೆ ತಗ್ಗಲಿದ್ದು, ಇದರ ಬೆನ್ನಿಗೆ ಮತ್ತೊಂದು ಚಂಡ ಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ದಕ್ಷಿಣ ಅಂಡಮಾನ್ ಸಾಗರದಲ್ಲಿ ಚಂಡ ಮಾರುತ ಸೃಷ್ಟಿಯಾಗಿದ್ದು, ಡಿಸೆಂಬರ್ 13 ಅಥವಾ 14 ರ ವೇಳೆಗೆ ದೇಶದ ಪೂರ್ವ ಕರಾವಳಿಗೆ ಅಪ್ಪಳಿಸಲಿದೆ. ಅಂಡಮಾನ್, ತಮಿಳುನಾಡು , ಕರ್ನಾಟಕ ದ ಮೇಲೆ ಪ್ರಭಾವ ಬೀರಬಹುದು ಎಂದು ಅಂದಾಜಿಸಲಾಗಿದೆ.