
ನವದೆಹಲಿ: ವಿಶ್ವ ಅಥ್ಲೆಲಿಟಿಕ್ ಚಾಂಪಿಯನ್ ಷಿಪ್ ನಲ್ಲಿ ಪುರುಷರ ಜಾವಲಿನ್ ಥೋ ಪೈನಲ್ ಸ್ಪರ್ದೆಯಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದ, ಟೋಕಿಯೊ ಒಲಂಪಿಕ್ಸ್ ಚಿನ್ನದ ವಿಜೇತ ನೀರಜ್ ಚೋಪ್ರಾ ತಮ್ಮ ಯಶಸ್ಸಿನ ಓಟವನ್ನು ಮುಂದುವರಿಸಿದ್ದಾರೆ.
ಹಾಲಿ ಚಾಂಪಿಯನ್ ಅಂಡರ್ಸನ್ ಪೀಟರ್ 90.14 ಮೀಟರ್ ಎಸೆಯುವುದರೊಂದಿಗೆ ತಮ್ಮ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವುದರ ಜೊತೆಗೆ ಚಿನ್ನದ ಪದಕವನ್ನು ಜಯಿಸಿದ್ದಾರೆ.
ಭಾರತದ ನೀರಜ್ ಚೋಪ್ರಾ ನಾಲ್ಕನೇ ಎಸೆತದಲ್ಲಿ 88.13 ಮೀಟರ್ ಎಸೆತದೊಂದಿಗೆ ಬೆಳ್ಳಿ ಪದಕ ಜನಿಸಿದ ನೀರಜ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಪದಕ ಜಯಸಿದ ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಮೊದಲ ಬೆಳ್ಳಿ ಪದಕ ಗೆದ್ದ ಕ್ರೀಡಾಪಟು ಎಂಬ ದಾಖಲೆ ಬರೆದಿದ್ದಾರೆ. 19 ವರ್ಷಗಳ ಬಳಿಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ನಲ್ಲಿ ಭಾರತಕ್ಕೆ ಪದಕ ಬಂದಿದೆ.