ಚಿತ್ರದುರ್ಗ ಆ. 24
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಶಿಕಾರಿಪುರದಲ್ಲಿ ಗೋರಕ್ಷ ಕಾರ್ಯಕರ್ತರ ಮೇಲೆ ನಡೆದ ಕೊಲೆ ಯತ್ನ ದಾಳಿಯನ್ನು ತೀವ್ರವಾಗಿ ಖಂಡಿಸಿ, ದಂಗೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಾಗೂ ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಲು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸೋಮವಾರ ಸಲ್ಲಿಸಿತು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಅ. 15 ರಂದು ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕ ವಾಗಿ ವಧೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು, ಕಾನೂನುಬದ್ಧವಾಗಿ ಗೋವುಗಳನ್ನು ರಕ್ಷಿಸಲು ಮುಂದಾದ ಗೋರಕ್ಷಕರ ಮೇಲೆ ಪೂರ್ವನಿಯೋಜಿತ ಸಂಚು ನಡೆಸಿ, ಮಾರಕಾಸ್ತ್ರಗಳಿಂದ ಕೊಲೆ ಮಾಡಲು ಯತ್ನಿಸಿದ ಘಟನೆಯು ಬಹಳ ಆತಂಕಕಾರಿಯಾಗಿದೆ. ಅಕ್ರಮ ಗೋಸಾಗಾಟಗಾರರ ಈ ಭೀಕರ ದಾಳಿಯಿಂದ ಗೋರಕ್ಷ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಅವರ ವಾಹನವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ. ಕೇವಲ ಶಿಕಾರಿಪುರ ಮಾತ್ರವಲ್ಲದೆ, ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಹ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ನಿರಂತರವಾಗಿ ಅಕ್ರಮ ಗೋಸಾಗಾಟ ಹಾಗೂ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿರುವುದು ಅತ್ಯಂತ ಖೇದಕರ ವಾಗಿದೆ ಎಂದರು.
“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 2020” ಜಾರಿಯಲ್ಲಿದ್ದರೂ ಸಹ, ರಾಜ್ಯದ ಹಲವೆಡೆ ಅಕ್ರಮ ಕಸಾಯಿಖಾನೆಗಳು ಕಾರ್ಯಾಚರಿಸುತ್ತಿರುವುದು ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳವು ಗೋರಕ್ಷಕರ ಮೇಲೆ ಕೊಲೆ ಯತ್ನ ನಡೆಸಿದ ಎಲ್ಲಾ ಆರೋಪಿಗಳನ್ನು ಹಾಗೂ ಅವರ ಹಿಂದಿರುವ ಸಂಚುಕೋರರನ್ನು ತಕ್ಷಣವೇ ಬಂಧಿಸಿ, ಅವರ ವಿರುದ್ದ ಜಮೀನು ರಹಿತ ಕಠಿಣ ಪ್ರಕರಣ ದಾಖಲಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ 2020ರ ಸೆಕ್ಷನ್ 8 ರಂತೆ, ಅಕ್ರಮ ಗೋಹತ್ಯೆ ಹಾಗೂ ಕಸಾಯಿ ಖಾನೆ ನಡೆಸುತ್ತಿರುವ ಕಟ್ಟಡಗಳನ್ನು ಧ್ವಂಸಗೊಳಿಸಿ, ಅವರ ಆಸ್ತಿಯನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಬೇಕು. ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ತಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಗಡಿಭಾಗಗಳಲ್ಲಿ ಪೊಲೀಸರು ನಿರಂತರ ರಾತ್ರಿ ಗಸ್ತು ಹೆಚ್ಚಿಸಬೇಕು ಮತ್ತು ವಿಶೇಷ ತಪಾಸಣಾ ಕೇಂದ್ರಗಳನ್ನು ನಿರ್ಮಿಸಿ ಅಕ್ರಮ ಗೋಸಾಗಾಟ ಜಾಲವನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು.. ಶಿಕಾರಿಪುರ ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಅಕ್ರಮ ಕಸಾಯಿಖಾನೆಗಳು ಹಾಗೂ ಪರವಾನಗಿ ಇಲ್ಲದ ಮಾಂಸದ ಅಂಗಡಿಗಳ ಮೇಲೆ ತಕ್ಷಣವೇ ದಾಳಿ ನಡೆಸಿ, ಅವುಗಳನ್ನು ಶಾಶ್ವತವಾಗಿ ಬಂದ್ ಮಾಡಿಸಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ, ತೇಜಶ್ವರ ಎಂ.ಜೆ.ಮಠ್, ಕಿಶೋರ್,ಜಿ. ರಾಮಾಂಜನೇಯ, ಪ್ರೇಮ್, ಸಿದಾರ್ಥ, ಸಂದೀಪ್ ಉಪಸ್ಥಿತರಿದ್ದರು
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j