India vs Australia: ಯಾರಾಗ್ತಾರೆ ಟೀಮ್ ಇಂಡಿಯಾದ ಆರಂಭಿಕರು: ಕನ್ನಡಿಗನಿಗೆ ಸಿಗುತ್ತಾ ಚಾನ್ಸ್?​

Shubman Gill Or KL Rahul?- Who Should Open With Rohit Sharma In Tests

India vs Australia Test: ಭಾರತ vs ಆಸ್ಟ್ರೇಲಿಯಾ (IND vs AUS) ನಡುವಿನ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಎರಡೂ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ನಿರತವಾಗಿವೆ. ಆದರೆ, ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಆಟಗಾರರು ಯಾರು ಎಂಬ ಕುತೂಹಲ ಎಲ್ಲರಲ್ಲಿದೆ. ಏಕೆಂದರೆ ಟೀಮ್ ಇಂಡಿಯಾ ಪ್ಲೇಯಿಂಗ್​ನಲ್ಲಿ ಆರಂಭಿಕರ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಲ್ಲಿ ನಾಯಕ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತವಾದರೆ, ಮತ್ತೊಂದು ಬದಿಯಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಎಂಬುದೇ ಕುತೂಹಲ.

ಏಕೆಂದರೆ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಇದ್ದಾರೆ. ಇಲ್ಲಿ ಪ್ರಸ್ತುತ ಫಾರ್ಮ್​ ಗಮನಿಸಿದರೆ ಶುಭ್​ಮನ್ ಗಿಲ್​ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು. ಮತ್ತೊಂದೆಡೆ ಅನುಭವಕ್ಕೆ ಮಣೆಹಾಕಿದರೆ ಕೆಎಲ್ ರಾಹುಲ್​ಗೆ ಚಾನ್ಸ್ ಸಿಗಲಿದೆ.

ಶುಭ್​ಮನ್ ಗಿಲ್ ಸೀಮಿತ ಓವರ್​ಗಳ ಕ್ರಿಕೆಟ್​ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಮಿಂಚುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಇತ್ತೀಚೆಗೆ ಬಾರಿಸಿರುವ ಬ್ಯಾಕ್ ಟು ಬ್ಯಾಕ್ ಶತಕಗಳು. ಅಲ್ಲದೆ ಕಳೆದ ವರ್ಷ ಆಡಿದ ಟೆಸ್ಟ್ ಪಂದ್ಯಗಳಲ್ಲೂ ಕೆಎಲ್ ರಾಹುಲ್ ಗಿಂತ ಉತ್ತಮ ಪ್ರದರ್ಶನ ನೀಡಿದ್ದಾರೆ. ಗಿಲ್ ಕೊನೆಯ 12 ಅಂತರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ (ಟಿ20, ಏಕದಿನ, ಟೆಸ್ಟ್) 76.90 ಬ್ಯಾಟಿಂಗ್ ಸರಾಸರಿಯಲ್ಲಿ 769 ರನ್ ಗಳಿಸಿದ್ದಾರೆ. ಇದರಲ್ಲಿ ದ್ವಿಶತಕ ಹಾಗೂ 4 ಶತಕಗಳಿವೆ.

ಮತ್ತೊಂದೆಡೆ, ಕೆಎಲ್ ರಾಹುಲ್ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಕೊನೆಯ 12 ಇನ್ನಿಂಗ್ಸ್‌ಗಳಲ್ಲಿ 28.90 ಸರಾಸರಿಯಲ್ಲಿ ಕೇವಲ 318 ರನ್ ಗಳಿಸಿದ್ದಾರೆ. ಇದೇ ವೇಳೆ ಒಂದೇ ಒಂದು ಶತಕ ಬಾರಿಸಲು ಕೂಡ ಸಾಧ್ಯವಾಗಲಿಲ್ಲ.

ಇಲ್ಲಿ ಶುಭ್​ಮನ್ ಗಿಲ್ ಹಾಗೂ ಕೆಎಲ್ ರಾಹುಲ್ ಅವರ ಪ್ರಸ್ತುತ ಅಂಕಿಅಂಶಗಳನ್ನು ಗಣನೆಗೆ ತೆಗೆದುಕೊಂಡರೆ, ಟೀಮ್ ಇಂಡಿಯಾ ಕೋಚ್ ಹಾಗೂ ನಾಯಕನ ಮೊದಲ ಆಯ್ಕೆ ಗಿಲ್ ಆಗಿರಲಿದ್ದಾರೆ. ಆದರೆ ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧ ಆಡಿದ ಅನುಭವ ಹೊಂದಿರುವ ಕೆಎಲ್ ರಾಹುಲ್​ ಅವರನ್ನು ಹೊರಗಿಡುವಂತೆಯೂ ಇಲ್ಲ. ಹೀಗಾಗಿ ಕನ್ನಡಿಗನನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಿದರೂ ಅಚ್ಚರಿಪಡಬೇಕಿಲ್ಲ.

ಅಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ಏಕದಿನ ಕ್ರಿಕೆಟ್​ನಲ್ಲಿ 5ನೇ ಕ್ರಮಾಂಕದಲ್ಲಿ ಆಡಿರುವ ಅನುಭವ ಹೊಂದಿರುವ ಕೆಎಲ್​ಆರ್​ ಅನ್ನು ಟೆಸ್ಟ್​ನಲ್ಲೂ ಅದೇ ಸ್ಥಾನದಲ್ಲಿ ಕಣಕ್ಕಿಳಿಸುವ ಆಯ್ಕೆಯೊಂದು ಟೀಮ್ ಇಂಡಿಯಾ ಮುಂದಿದೆ. ಹಾಗಾಗಿ ಆರಂಭಿಕನ ಸ್ಥಾನ ಕೈ ತಪ್ಪಿದರೂ ಕೆಎಲ್ ರಾಹುಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗುವ ಸಾಧ್ಯತೆ ಕೂಡ ಇದೆ.

ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್ .

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).

 

 

source https://tv9kannada.com/sports/cricket-news/shubman-gill-or-kl-rahul-who-should-open-with-rohit-sharma-in-tests-kannada-news-zp-au50-514817.html

Leave a Reply

Your email address will not be published. Required fields are marked *