
India vs Australia 1st Test: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಟೆಸ್ಟ್ ಸರಣಿಯು ಗುರುವಾರದಿಂದ (ಫೆ.9) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳನ್ನು ನಡೆಯಲಿದ್ದು, ಮೊದಲ ಪಂದ್ಯಕ್ಕೆ ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಕುತೂಹಲ. ಏಕೆಂದರೆ ಎರಡೂ ತಂಡಗಳ ಆಟಗಾರರಲ್ಲೂ ಗಾಯದ ಸಮಸ್ಯೆ ಎದುರಾಗಿದೆ. ಟೀಮ್ ಇಂಡಿಯಾದ (Team India) ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ಆಸೀಸ್ ಪರ ಕಣಕ್ಕಿಳಿಯುತ್ತಿಲ್ಲ.
ಇತ್ತ ಟೀಮ್ ಇಂಡಿಯಾದಲ್ಲಿ ರಿಷಭ್ ಪಂತ್ ಅವರ ಅಲಭ್ಯತೆ ಕೂಡ ಎದ್ದು ಕಾಣುತ್ತಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಈ ಕುತೂಹಲವನ್ನು ತಣಿಸುವಂತೆ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದ್ದಾರೆ ಮಾಜಿ ಟೀಮ್ ಇಂಡಿಯಾ ಆಟಗಾರ ವಾಸಿಂ ಜಾಫರ್.
ವಾಸಿಂ ಜಾಫರ್ ಪ್ರಕಾರ, ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್, ಇವರಿಬ್ಬರನ್ನೂ ಕಣಕ್ಕಿಳಿಸಲಿದೆ. ಆದರೆ ಇಲ್ಲಿ ಗಿಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ರೋಹಿತ್ ಶರ್ಮಾ ಜೊತೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಅದೇ ರೀತಿ 5ನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ಗೆ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ವಾಸಿಂ ಜಾಫರ್ ತಿಳಿಸಿದ್ದಾರೆ.
ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಗಿಲ್ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ಪಡೆಯಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಾಗ್ಯೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸೂರ್ಯಕುಮಾರ್ಗೆ ಚಾನ್ಸ್ ಸಿಗುವುದು ಅನುಮಾನ. ಬದಲಾಗಿ ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದಿದ್ದಾರೆ.
ಇದನ್ನೂ ಓದಿ: ಟಿ20 ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್ಮನ್ಗಳ ಪಟ್ಟಿ ಇಲ್ಲಿದೆ
ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಕಾಣಿಸಿಕೊಳ್ಳುವುದು ಖಚಿತ. ಹೆಚ್ಚುವರಿ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕೂಡ ತಂಡದಲ್ಲಿರಲಿದ್ದಾರೆ. ಹಾಗೆಯೇ ವೇಗಿಗಳಾಗಿ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ವಾಸಿಂ ಜಾಫರ್ ಹೇಳಿದ್ದಾರೆ. ಅದರಂತೆ ಮೊದಲ ಟೆಸ್ಟ್‌ಗೆ ವಾಸಿಂ ಜಾಫರ್ ಅವರ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
- ರೋಹಿತ್ ಶರ್ಮಾ
- ಕೆಎಲ್ ರಾಹುಲ್
- ಚೇತೇಶ್ವರ ಪೂಜಾರ
- ವಿರಾಟ್ ಕೊಹ್ಲಿ
- ಶುಭ್ಮನ್ ಗಿಲ್
- ಕೆಎಸ್ ಭರತ್ (ವಿಕೆಟ್ ಕೀಪರ್)
- ರವೀಂದ್ರ ಜಡೇಜಾ
- ರವಿಚಂದ್ರನ್ ಅಶ್ವಿನ್
- ಕುಲ್ದೀಪ್ ಯಾದವ್
- ಮೊಹಮ್ಮದ್ ಶಮಿ
- ಮೊಹಮ್ಮದ್ ಸಿರಾಜ್
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.