ವಿಷಪೂರಿತ ಮದ್ಯ ಸೇವಿಸಿ 29 ಸಾವು, 60 ಮಂದಿ ಅಸ್ವಸ್ಥ! ಎಸ್ಪಿ ಅಮಾನತು, ಸಿಬಿ ಸಿಐಡಿ ತನಿಖೆಗೆ ಆದೇಶ.

ಕಲ್ಲಾಕುರಿಚಿ: ವಿಷಪೂರಿತ ಮದ್ಯ ಸೇವಿಸಿ (Spurious Liquor) ಇದುವರೆಗೆ 25 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ತಮಿಳುನಾಡಿನಲ್ಲಿ (Tamilnadu) ನಡೆದಿದೆ.

ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ಈ ದಾರುಣ ಘಟನೆ ನಡೆದಿದ್ದು, ವಿಷಪೂರಿತ ಮದ್ಯ ಸೇವಿಸಿ ಇದುವರೆಗೆ 29 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮದ್ಯ ಸೇವಿಸಿ ಆರೋಗ್ಯ ಹದಗೆಟ್ಟಿದ್ದವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನೆಯ ಗಂಭೀರತೆ ಅರಿತು ತಕ್ಷಣವೇ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕುರಿತು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಮಾಹಿತಿ ಪ್ರಕಾರ, ಈ ಪ್ರಕರಣವು ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದ್ದು, ವಿಷಯುಕ್ತ ಅಕ್ರಮ ಮದ್ಯದಿಂದ ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ನಂತರ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದೆ. ಸತ್ತವರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಸದ್ಯ ಪೊಲೀಸರು ಕ್ರಮ ಕೈಗೊಂಡು ಮದ್ಯ ಮಾರಾಟಗಾರರನ್ನು ಬಂಧಿಸಿ 200 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ಸಿಬಿ ಸಿಐಡಿ ತನಿಖೆಗೆ ಸಿಎಂ ಸ್ಟಾಲಿನ್ ಆದೇಶಿಸಿದ್ದಾರೆ. ಅಲ್ಲದೆ ಜಿಲ್ಲೆಯ ಎಸ್ಪಿಯನ್ನು ಅಮಾನತು ಮಾಡಲಾಗಿದ್ದು, ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಅಕ್ರಮ ,ಮದ್ಯ ಮದ್ಯ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಎಲ್ಲರೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡು ಪ್ರಜ್ಞಾಹೀನರಾದರು ಎಂದು ಮೃತರ ಸಂಬಂಧಿಕರು ಹೇಳುತ್ತಾರೆ. ಅಕ್ರಮ ಸಾರಾಯಿ ಕುಡಿಯಬೇಡಿ ಎಂದು ನಾವು ಯಾವಾಗಲೂ ಅವರಿಗೆ ಹೇಳುತ್ತೇವೆ. ಆದರೆ ಅವರು ನಮ್ಮ ಮಾತು ಕೇಳಲಿಲ್ಲ ಎಂದು ಸಂಬಂಧಿಕರು ಅಳಲು ತೋಡಿಕೊಂಡಿದ್ದಾರೆ.

ಡಿಎಂ ವರ್ಗಾವಣೆ ಮತ್ತು ಎಸ್ಪಿ ಅಮಾನತು

ವಿಷಪೂರಿತ ಮದ್ಯ ಸೇವಿಸಿ ಇದುವರೆಗೆ 25 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ದಾಖಲಾದ ಬೆನ್ನಲ್ಲೇ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಈ ಕುರಿತು ಸಿಬಿ ಸಿಐಡಿ ತನಿಖೆಗೆ ಆದೇಶಿಸಿದ್ದು, ಜಿಲ್ಲಾಧಿಕಾರಿ ಶ್ರವಣಕುಮಾರ್ ಜತ್ವಾತ್ ಅವರನ್ನು ವರ್ಗಾವಣೆ ಮಾಡಿದ್ದಾರೆ. ಇದರೊಂದಿಗೆ ಕಲ್ಲಕುರಿಚಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎಸ್.ಪ್ರಶಾಂತ್ ಅವರನ್ನು ಸಿಎಂ ನೇಮಕ ಮಾಡಿದ್ದಾರೆ.

ಇದೇ ವೇಳೆ ಕಲ್ಲಕುರಿಚಿ ಎಸ್ಪಿ ಸಮಯಸಿಂಗ್ ಮೀನಾ ಅವರನ್ನು ಅಮಾನತು ಮಾಡಲಾಗಿದ್ದು, ರಜತ್ ಚತುರ್ವೇದಿ ಅವರನ್ನು ನೂತನ ಎಸ್ಪಿಯಾಗಿ ನೇಮಿಸಲಾಗಿದೆ. ಇದಲ್ಲದೇ ಜಿಲ್ಲೆಯ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Source : https://kannada.news18.com/news/national-international/several-dead-and-60-hospitalised-in-kallakurichi-after-consuming-illicit-liquor-cm-stalin-takes-action-akd-1746272.html

Leave a Reply

Your email address will not be published. Required fields are marked *