ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ನಡೆಸುವ 2024ರ ಸಾಮಾನ್ಯ ಪ್ರವೇಶ ಪರೀಕ್ಷೆ ರಾಜ್ಯಾದ್ಯಂತ ಏಪ್ರಿಲ್ 18 -19ರಂದು ನಡೆಯಲಿದೆ.

ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಸಿಇಟಿಗೆ 3,27,384 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ.ಈ ವರ್ಷ ಅತಿ ಹೆಚ್ಚಿನ ಅಭ್ಯರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.
ಪರೀಕ್ಷೆ ಬೆಳಿಗ್ಗೆ 10:30 ಕ್ಕೆ ಆರಂಭವಾಗಲಿದ್ದು ವಿರಾಮ ಸಮಯ ಸೇರಿ 3.50 ರವರೆಗೆ ಪರೀಕ್ಷೆ ನಡೆಯಲಿದೆ. ಏಪ್ರಿಲ್ 18ರಂದು ಜೀವಶಾಸ್ತ್ರ, ಗಣಿತಶಾಸ್ತ್ರ ಮತ್ತು ಏಪ್ರಿಲ್ 19 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳು ಪ್ರವೇಶ ಪತ್ರ ಮತ್ತು ಮಾನ್ಯತೆ ಇರುವ ಗುರುತಿನ ಚೀಟಿ ತೋರಿದರೆ ಮಾತ್ರ ಕೊಠಡಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1