ರೈಲ್ವೆ ಹಳಿ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ, ಜುಲೈ 19: ರೈಲ್ವೆ ಹಳಿ (Railway Track) ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ (Gangavati) ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ ನಗರದ ನಿವಾಸಿಗಳಾದ ಮೌನೇಶ್ ಪತ್ತಾರ (23), ಸುನೀಲ್ (23), ವೆಂಕಟ್ ಭೀಮನಾಯ್ಕ (20) ಮೃತ ಯುವಕರು. ಮೂವರು ಯುವಕರು ಕಳೆದ ರಾತ್ರಿ ರೈಲ್ವೆ ಹಳಿ ಬಳಿಯೇ ಪಾರ್ಟಿ ಮಾಡಿ, ನಂತರ ಹಳಿ ಮೇಲೇ ಮಲಗಿದ್ದರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.