310 ಪ್ರಾಚಾರ್ಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಚಾರ್ಯರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಿದೆ.

ಹುದ್ದೆ ಭರ್ತಿ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಆಧಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಲಿದೆ. ಒಟ್ಟಾರೆ 310 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕ ವೃಂದಕ್ಕೆ 45 ಮತ್ತು ರಾಜ್ಯ ವ್ಯಾಪ್ತಿ 265 ಹುದ್ದೆಗಳಿವೆ.

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು. ಪ್ರವರ್ಗ 2ಎ, 2ಬಿ, 3ಎ, ಮತ್ತು 3 ಬಿ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವು 5,000 ಇರಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ನೀಡಲಾಗಿದೆ. 2,500 ಪ್ರಕ್ರಿಯೆ ಶುಲ್ಕ ಪಾವತಿಸಬೇಕು.

ಪ್ರಾಧಿಕಾರದ ವೆಬ್ ಸೈಟ್ http://kea.kar.nic.in/ ಮೂಲಕ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 16 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನ ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಸಲು ಜನವರಿ 17 ಕೊನೆಯ ದಿನವಾಗಿದೆ. ನೇಮಕಾತಿ ವಿವರಗಳನ್ನು ಕೆಇಎ ವೆಬ್ ಸೈಟ್ http://kea.kar.ilnic.in/ ನಲ್ಲಿ ಪಡೆದುಕೊಳ್ಳಬಹುದು ಎಂದು ಕೆಇಎ ತಿಳಿಸಿದೆ.

Leave a Reply

Your email address will not be published. Required fields are marked *