ಭಾರತದ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಇಂಗ್ಲೆಂಡ್ ತಂಡ 28 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 106 ರನ್ಗಳಿಂದ ಬಗ್ಗು ಬಡಿಯಿತು. ಇದೀಗ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿ ನಿಂತಿವೆ.
![](https://samagrasuddi.co.in/wp-content/uploads/2024/02/image-169-1024x576.png)
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಂದಿನಿಂದ (ಫೆ.15) ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಪ್ಲೇಯಿಂಗ್ ಇಲೆವೆನ್ನಲ್ಲಿ ಪ್ರಮುಖ ವೇಗಿ ಮಾರ್ಕ್ ವುಡ್ ಕಾಣಿಸಿಕೊಂಡಿದ್ದಾರೆ.
ಅಂದರೆ 2ನೇ ಟೆಸ್ಟ್ ಪಂದ್ಯದಲ್ಲಿ ಮಾರ್ಕ್ ವುಡ್ ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಯುವ ಸ್ಪಿನ್ನರ್ ಶೊಯೆಬ್ ಬಶೀರ್ಗೆ ಚಾನ್ಸ್ ನೀಡಲಾಗಿತ್ತು. ಆದರೆ ಮೂರನೇ ಪಂದ್ಯದಿಂದ ಬಶೀರ್ ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ಮಾರ್ಕ್ ವುಡ್ಗೆ ಸ್ಥಾನ ಕಲ್ಪಿಸಲಾಗಿದೆ.
ಅದರಂತೆ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಜೇಮ್ಸ್ ಅ್ಯಂಡರ್ಸನ್ ಹಾಗೂ ಮಾರ್ಕ್ ವುಡ್ ಅವರನ್ನು ವೇಗಿಗಳಾಗಿ ಕಣಕ್ಕಿಳಿಸಿದರೆ, ಸ್ಪಿನ್ನರ್ಗಳಾಗಿ ರೆಹಾನ್ ಅಹ್ಮದ್ ಮತ್ತು ಟಾಮ್ ಹಾರ್ಟ್ಲಿ ತಂಡದಲ್ಲಿದ್ದಾರೆ.
ಸ್ಟಾರ್ ಆಟಗಾರರು ಅಲಭ್ಯ:
ಈ ಸರಣಿಯಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲೂ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. ಇನ್ನು ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.
ಹಾಗೆಯೇ ತೊಡೆಸಂಧು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಈ ಮ್ಯಾಚ್ಗೆ ಅಲಭ್ಯರಾಗಿದ್ದಾರೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಯುವ ಬಳಗದೊಂದಿಗೆ ಕಣಕ್ಕಿಳಿಯುವುದು ಖಚಿತ.
ಸರಣಿ ಸಮಬಲ:
ಹೈದರಾಬಾದ್ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 28 ರನ್ಗಳ ಜಯ ಸಾಧಿಸಿತ್ತು. ಇನ್ನು ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 106 ರನ್ಗಳ ಅಮೋಘ ಗೆಲುವು ದಾಖಲಿಸಿತ್ತು. ಇದೀಗ ರಾಜ್ಕೋಟ್ ಟೆಸ್ಟ್ನಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಅ್ಯಂಡರ್ಸನ್.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1