
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು, ಚೈಲ್ಡ್ ಫಂಡ್ ಇಂಟರ್‌ನ್ಯಾಶನಲ್ ಮತ್ತು ಜಿಲ್ಲಾಡಳಿತ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 18.06.2025 ರಂದು ಹಮ್ಮಿಕೊಳ್ಳಲಾತಯಿತು.

ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯ ಅಪಾರ ಜಿಲ್ಲಾಧಿಕಾರಿಗಳಾದ ಡಾ. ಶಿವರಾಜು ಪಿ ಇವರು ಉದ್ಘಾಟಿಸಿ ಮಾತನಾಡುತ್ತಾ ಇದು ಹೆಚ್ಚಿನ ಜನರಿಗೆ ತಲುಪುವುದರೊಂದಿಗೆ ಜನರು ಇದರ ಸದುಪಯೋಗ ಪಡಿಸಿಕೊಳ್ಳಲಿ ಮತ್ತು ಹೆಚ್ಚಿನ ಜನರು ಈ ಸೌಲಭ್ಯಗಳಿಗೆ ನೋಂದಾಯಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ ಎಂದರು. ಜಾಗೃತಿ ವಾಹನವನ್ನು ಉದ್ಘಾಟಿಸುತ್ತಾ ಸಂಸ್ಥೆಯ ಕಾರ್ಯ ವೈಖರಿಯನ್ನು ಪ್ರಶಂಶಿಸಿ ಇನ್ನು ಹೆಚ್ಚಿನ ಇಂತಹ ಕಾರ್ಯಕ್ರಮಗಳು ಸಂಸ್ಥೆಯಿಂದ ಆಗಲಿ ಇದಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರಾದ ಶ್ರೀಮತಿ ವೀಣಾ ಎಸ್.ಆರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮೈಸೂರು ಇದರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀ ಯೋಗೇಶ್ ಎಂ. ಟಿ, ಮೈಸೂರು ಮಹಾನಗರ ಪಾಲಿಕೆಯ ಡೇ- ಎನ್ .ಯು.ಎಲ್.ಎಮ್ ಇದರ ಅಭಿಯಾನ ವ್ಯವಸ್ಥಾಪಕರಾದ ಡಾ. ಬೈರಲಿಂಗಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೈಸೂರು ಇದರ ಉತ್ತರವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ರೇವಣ್ಣ ಎಸ್ ಹಾಗೂ ಮೇವಾ ಎಜುಕೇಶನ್ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಶೇಕ್ ಅಬ್ದುಲ್ ನವಾಫ್ ಇವರು ಉಪಸ್ಥಿತರಿದ್ದು ತಮ್ಮ ಇಲಾಖೆಯಲ್ಲಿ ಮಕ್ಕಳಿಗೆ ಯುವ ಜನರಿಗೆ ಮತ್ತು ವಯಸ್ಕರಿಗೆ ಇರುವಂತ ವಿವಿಧ ಯೋಜನೆಗಳು ಮತ್ತು ಅದನ್ನು ಹೇಗೆ ಪಡೆದುಕೊಳ್ಳಬೇಕು ಎನ್ನುವುದನ್ನು ತಿಳಿಸಿದರು ಜೊತೆಯಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿ ಜನರಿಗೆ ಯಾವುದೇ ಸಮಸ್ಯೆಗಳು ಇದ್ದಲ್ಲಿ ನೇರವಾಗಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್.ಎಲ್.ಎಚ್. ಪಿ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರೊ. ಜೋಶ್ ವಿ. ಕೆ ಇವರು ವಹಿಸಿಕೊಂಡಿದ್ದರು
ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮದ ಮೂಲಕ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು ಇವರು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಷ್ಮಾನ್ ಕಾರ್ಡ್, ಈ-ಶ್ರಮ ಕಾರ್ಡ್, ಲೇಬರ್ ಕಾರ್ಡ್, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ದೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ನೀಡಲಾಗುವ ಪೋಷಕತ್ವ ಯೋಜನೆ ಹಾಗೂ ಇನ್ನಿತರ ಸರಕಾರಿ ಯೋಜನೆಗಳ ಕುರಿತು ಜಾಗೃತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 22 ದಿನಗಳು ವಾಹನದಲ್ಲಿ ಧ್ವನಿವರ್ಧಕ ಮೂಲಕ ಪ್ರಚಾರ, ಜೆ.ಎಸ್.ಎಸ್ ಸಮುದಾಯ ಬಾನುಲಿ ಕೇಂದ್ರ 91.2 ಎಫ್.ಎಮ್ ಕೇಂದ್ರದ ಮೂಲಕ ಜಾಗೃತಿ ಕಾರ್ಯಕ್ರಮ, ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿಯನ್ನು ಮೂಡಿಸುವ ಮೂಲಕ 3.5 ಲಕ್ಷಕ್ಕೂ ಅಧಿಕ ಜನರಿಗೆ ತಲುಪುವುದಾಗಿ ನಿರೀಕ್ಷಿಸಲಾಗಿದೆ ಮತ್ತು ಸೌಲಭ್ಯಗಳಿಂದ ವಂಚಿತರಾಗಿರುವ ಜನರಿಗೆ ಈ ಸೌಲಭ್ಯಗಳಿಗೆ ನೋಂದಾಯಿಸುವ ಸೌಕರ್ಯವನ್ನು ಈ ಅಭಿಯಾನದ ಸಂದರ್ಭದಲ್ಲಿ ಮಾಡಲಾಗುವುದು,
ಜನಸಂಪರ್ಕ ಮೇಳ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಸಂಬಂಧಿಸಿದ ಆಯಾ ಇಲಾಖೆ ಅಧಿಕಾರಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದೊಂದಿಗೆ ಸೌಲಭ್ಯಗಳಿಂದ ವಂಚಿತರಾದ ಸಮುದಾಯದ ಜನರಿಗೆ ಎಲ್ಲಾ ಸೇವೆಗಳು ಒಂದೇ ಸೂರಿನ ಕೆಳಗೆ ಸಿಗುವಂತೆ ಮಾಡಲಾಗುವುದು ಹಾಗೂ ಸಮುದಾಯದ ಜನರು ಸ್ಥಳೀಯವಾಗಿ ಎದುರಿಸುತ್ತಿರುವ ಇನ್ನಿತರ ಸಮಸ್ಯೆಗಳ ಕುರಿತು ಬರುವ ಅಧಿಕಾರಿಗಳೊಂದಿಗೆ ಚರ್ಚಿಸುವುದರೊಂದಿಗೆ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ರೀತಿಯಲ್ಲಿ ಗಮನ ಹರಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಸರಸ್ವತಿ ಇವರು ಕಾರ್ಯಕ್ರಮದ ಕುರಿತು ಪ್ರಾಥಮಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಹೆಚ್ಚು ಸಮುದಾಯ ಜನರು ಭಾಗವಹಿಸಿದರು, ಸಂಸ್ಥೆಯ ಸಿಂಬದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.