ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ.

ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರ ಜಾರಿಯಾಗಲಿದೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ ಕನಿಷ್ಠ 5 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಲಿದೆ.

ಸರ್ಕಾರ ಬಿಯರ್ ಮೇಲಿನ ತೆರಿಗೆಯನ್ನು ಕಳೆದ ಜುಲೈ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಪ್ರತಿ ಬಾಟಲ್ ಬಿಯರ್ ಬೆಲೆ ಕನಿಷ್ಠ 10 ರೂಪಾಯಿ ಜಾಸ್ತಿಯಾಗಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಕಚ್ಚಾ ಸಾಮಗ್ರಿ ದರ ಹೆಚ್ಚಳ ಕಾರಣ ನೀಡಿ ಪ್ರತಿ ಬಿಯರ್ ಬಾಟಲ್ ಮೇಲೆ ಕನಿಷ್ಠ 5 ರಿಂದ 20 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಿವೆ. ರಾಜ್ಯದಲ್ಲಿ ಹೆಚ್ಚಾಗಿ ಬಳಕೆಯಾಗುವ ಲೆಜೆಂಡ್, ಆರ್ಸಿ ಸ್ಟ್ರಾಂಗ್, ನಾಕೌಟ್, ಬುಲೆಟ್, ಪವರ್ ಕೂಲ್ ಸೇರಿ ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗಿದೆ.

Source : https://m.dailyhunt.in/news/india/kannada/kannadadunia-epaper-kannadad/madyapriyarige+matte+shaak+biyar+prati+baatal+ge+5+20+ru+hechhala+onduvare+varshadalli+5ne+baari+bele+erike+bare-newsid-n624283963?listname=topicsList&topic=for%20you&index=0&topicIndex=0&mode=pwa&action=click

Leave a Reply

Your email address will not be published. Required fields are marked *