Lok Sabha Election 2024 Phase 2 Voting Updates: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ದೇಶದಾದ್ಯಂತ ಇಂದು ನಡೆಯುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದೆ. ಮತದಾನ ಪ್ರಕ್ರಿಯೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.

ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯ ವರೆಗೆ ಶೇಕಡಾ 50.93ರಷ್ಟು ಮತದಾನವಾಗಿದೆ. ಹಾಗಾದ್ರೆ, ಯಾವ್ಯಾವ ಕ್ಷೇತ್ರಗಳಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎನ್ನುವುದನ್ನು ನೋಡುವುದಾದರೆ
- ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಶೇಕಡಾ 40.10ರಷ್ಟು ಮತದಾನ
- ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇಕಡಾ 41.12ರಷ್ಟು ಮತದಾನ
- ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇಕಡಾ 49.62ರಷ್ಟು ಮತದಾನ
- ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 40.77ರಷ್ಟು ಮತದಾನ
- ಚಾಮರಾಜನಗರ ಕ್ಷೇತ್ರದಲ್ಲಿ ಶೇಕಡಾ 54.82ರಷ್ಟು ಮತದಾನ
- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 55.90ರಷ್ಟು ಮತದಾನ
- ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 52.14ರಷ್ಟು ಮತದಾನ
- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 58.76ರಷ್ಟು ಮತದಾನ
- ಹಾಸನ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 55.92ರಷ್ಟು ಮತದಾನ
- ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 54.66ರಷ್ಟು ಮತದಾನ
- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 57.44ರಷ್ಟು ಮತದಾನ
- ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇಕಡಾ 53.55ರಷ್ಟು ಮತದಾನ
- ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 56.62ರಷ್ಟು ಮತದಾನ
- ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೇಕಡಾ 57.49ರಷ್ಟು ಮತದಾನ