ಚಿತ್ರದುರ್ಗ: ಬಿಜೆಪಿ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ.

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

ಚಿತ್ರದುರ್ಗ ಜ. 26

ಜನವರಿ 26 ಪ್ರತಿಯೊಬ್ಬ ಭಾರತೀಯರಿಗೂ ಮಹತ್ವವಾದ ಮತ್ತು ಪವಿತ್ರವಾದ ದಿನ ಎಲ್ಲಾ ಭಾರತೀಯರನ್ನು ಭಾವನಾತ್ಮಕವಾಗಿ, ಭಾಷಿಕವಾಗಿ, ಭೌಗೋಳಿಕವಾಗಿ ಹಾಗೂ ಆಡಳಿತಾತ್ಮಕವಾಗಿ ಬೆಸುಗೆ ಹಾಕಿದ ದಿನ ಮತ್ತು ನಮ್ಮ ದೇಶದ ಶ್ರೇಷ್ಠ ಸಂವಿಧಾನವನ್ನು ಮನಃಪೂರ್ವಕವಾಗಿ ಅಂತಃಕರಣದಿಂದ ಒಪ್ಪಿ ಸಂತಸಪಟ್ಟ ದಿನ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹೇಳಿದರು.

ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾರತಾಂಬೆಯ ಭಾವಚಿತ್ರಕ್ಕ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬ್ರಿಟೀಷರ ಆಳ್ವಿಕೆಗೆ ಒಳಪಟ್ಟಿದ್ದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನೇಕ ಮಹನೀಯರುಗಳು, ಸ್ವಾತಂತ್ರ್ಯ ಹೋರಾಟಗಾರರ, ತ್ಯಾಗ-ಬಲಿದಾನ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರಕಿತು ಎಂದು ಅವರು ಸ್ವಾತಂತ್ರ್ಯಗೊಂಡ ನಂತರ, ಇಡೀ ದೇಶವನ್ನು ಭೌಗೋಳಿಕ ವಾಗಿ, ಭಾಷಿಕವಾಗಿ ಒಗ್ಗೂಡಿಸುವ ಅನಿವಾರ್ಯತೆ ಉದ್ಭವಿಸಿತು. ಜೊತೆಗೆ ಏಕರೂಪದ ಕಾನೂನು ಹಾಗೂ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ದೇಶದ ಏಕತೆಯನ್ನು ಬಲಪಡಿಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ “ಭಾರತ ಸಂವಿಧಾನ ಕರಡು ರಚನಾ ಸಮಿತಿ”ಯನ್ನು ರಚಿಸಲಾಯಿತು ಎಂದು ಹೇಳಿದರು 

77 ವರ್ಷಗಳಿಂದ ನಾವುಗಳು ಭಾರತದ ಸಂವಿಧಾನದ ಅಡಿಯಲ್ಲಿ ಕೆಲಸವನ್ನು ಮಾಡಲಾಗುತ್ತಿದೆ. ವಿಶ್ವದ ಬಲಿಷ್ಠ ಶಕ್ತಿಯಾಗಿ ಭಾರತ ಹೊರ ಹೊಮ್ಮಿದೆ. ನಮ್ಮ ಸೈನಿಕರ ಆಪರೇಷನ್ ಸಿಂಧೂರ ಕಾರ್ಯಾ ಚರಣೆಯಿಂದ ವಿಶ್ವಕ್ಕೆ ಭಾರತ ಸೇನೆ ಬಲಿಷ್ಠ ಎಂದು ತಿಳಿದು ಬಂದಿದೆ. ಇದರಿಂದ ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಉತ್ತಮವಾಗಿದೆ. ಪಾಶ್ಚಿಮಾತ್ಯರು ಭಾರತವನ್ನು ಬಡವರ, ಹಾವಾಡಿಗೆ ದೇಶ ಎನ್ನುತ್ತಿದ್ದರು ಆದರೆ ಈಗ ಭಾರತ ಬಲಿಷ್ಠವಾದ ದೇಶವಾಗುವುದರ ಮೂಲಕ ಪ್ರಪಂಚಕ್ಕೆ ತನ್ನ ಶಕ್ತಿಯನ್ನು ತೋರಿಸಿದೆ. ವಿಜ್ಞಾನ ಆರ್ಥಿಕತೆ ರಕ್ಷಣಾ ವ್ಯವಸ್ಥೆಯಲ್ಲಿ ಪ್ರಗತಿಯನ್ನು ಸಾಧಿಸಿದೆ ಎಂದರು. 

ಭಾರತೀಯರ ಪಾಲಿಗೆ ಹೆಮ್ಮೆಯ ದಿನವಾಗಿ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಸಂವಿಧಾನದ ಮತ್ತು ಅದರ ಆಶಯಗಳನ್ನು ಈ ದಿನ ನಮ್ಮ  ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನೆನಪಿಸ ಬೇಕಾಗುತ್ತದೆ  ಭಾರತೀಯರಾದ ನಾವು ಸಾಮಾಜಿಕ ಸಮಾನತೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಹಕ್ಕುಗಳು ನೀಡಲು ಈ ಸಂದರ್ಭದಲ್ಲಿ ನಮಗೆ ದೊರೆತಿದ್ದು ಇಂತಹ ಅವಕಾಶಗಳನ್ನು ನಾವುಗಳು ಈ ದಿನವನ್ನು ಹೆಮ್ಮೆಯಿಂದ ಆಚರಿಸಲು ಸಂಭ್ರಮ ಪಡುವಂತಿರಬೇಕು ಎಂದರು.

ಬಿಜೆಪಿಯ ಮಾಜಿ ಅಧ್ಯಕ್ಷರಾದ ಟಿ.ಜಿ.ನರೇಂದ್ರನಾಥ್ ಮಾತನಾಡಿ,  ಎರಡು ವರ್ಷಗಳ ಸುಧೀರ್ಘ ಅವಲೋಕನ ಮತ್ತು ಚರ್ಚೆಯ ನಂತರ, ಅಂತಿಮವಾಗಿ 26 ನವೆಂಬರ್ 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಡಾ||ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನವನ್ನು ದೇಶಾದ್ಯಂತ 26ನೇ ಜನವರಿ 1950 ರಿಂದ ಜಾರಿಗೆ ತರಲಾಯಿತು. ಅದಕ್ಕಾಗಿಯೇ ನಾವು ಈ ದಿನವನ್ನು ಸಂವಿಧಾನ ದಿನವನ್ನಾಗಿ ಹಾಗೂ ಗಣರಾಜ್ಯೋತ್ಸವ ಎಂದು ಆಚರಿಸುತ್ತೇವೆ ಎಂದು ತಿಳಿಸಿದ ಅವರು ಸ್ವತಂತ್ರ ಭಾರತಕ್ಕೊಂದು ಸದೃಢ ಸಂವಿಧಾನ ಕೊಟ್ಟಿದ್ದು ಡಾ.ಬಿ.ಆರ್.ಅಂಬೇಡ್ಕರ್. ಅವರ ಅವಿರತ ಪ್ರಯತ್ನ ಹಾಗೂ ಪಾಂಡಿತ್ಯದಿಂದಾಗಿ ನಮಗೆ ವಿಶ್ವದಲ್ಲಿಯೇ ಅತ್ಯಂತ ಸುದೀರ್ಘವಾದ, ಉತ್ತಮವಾದ ಲಿಖಿತ ಸಂವಿಧಾನ ದೊರೆತಿದೆ. ಹಾಗಾಗಿ ಸಂವಿಧಾನ ರಚನೆಗೆ ಕಾರಣರಾದವರೆಲ್ಲರನ್ನು ನಾವು ಸ್ಮರಿಸಬೇಕಿದೆ ಅದನ್ನು ಪಾಲಿಸುವ ಕಾರ್ಯವಾಗಬೇಕಿದೆ ಎಂದರು.

ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ನೇರವೇರಿಸಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರ ಸ್ವಾಮಿ ಮಾತನಾಡಿ, ದೇಶದಲ್ಲಿ ತುರ್ತ ಪರಿಸ್ಥಿತಿಯನ್ನು ಹೇರುವುದರ ಮೂಲಕ ಸಂವಿಧಾನಕ್ಕೆ ಅಗೌರವನ್ನು ತೋರಿಸಿದ್ದ ಕಾಂಗ್ರೆಸ್ ಪಕ್ಷವಾಗಿದೆ. ಆದರೆ ಈ ದಿನ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಮಹಾನೀಯರು ನೀಡಿದ ಸಂವಿಧಾನವನ್ನು ಅಗೌರವ ತೋರಿಸಿದ್ದು ಕಾಂಗ್ರೆಸ್ ಆಗಿದೆ ಎಂದರು.

ಬಿಜೆಪಿ ಮಾಜಿ ಅಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್ ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಜಿ.ಪಂ.ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ರೈತ ಮೋರ್ಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ಮುಖಂಡರಾದ ಪಾಪೇಶ್ ನಾಯ್ಕ್,ಕಲ್ಲಂ ಸೀತಾರಾಮರೆಡ್ಡಿ, ರೇಖಾ, ಬಸಮ್ಮ, ಭರತ್, ಕವಿತಾ, ಶಂಭು ಕಿರಣ ವಸಂತ್ ಆಣ್ಣಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

Views: 3

Leave a Reply

Your email address will not be published. Required fields are marked *