ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿಸಿಕೊಂಡಿದ್ದ ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.
ಬೆಂಗಳೂರು, (ಮಾರ್ಚ್ 27): ಲೋಕಸಭಾ ಚುನಾವಣೆ (Loksabha Elections 2024) ಹಿನ್ನೆಲೆಯಲ್ಲಿ ಬಿಜೆಪಿ ಏಳನೇ ಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿಸಿಕೊಂಡಿದ್ದ ಕರ್ನಾಟಕದ ಚಿತ್ರದುರ್ಗ ಲೋಕಸಭಾ (Chitradurga Loksabha) ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಹಾಲಿ ಸಂಸದ, ಕೇಂದ್ರ ಸಚಿವರಾಗಿದ್ದ ನಾರಾಯಣಸ್ವಾಮಿ (narayanaswamy) ಅವರಿಗೆ ಕೊಕ್ ನೀಡಲಾಗಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತ, ಮಾಜಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ(govind karjol )ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. ಇದರೊಂದಿಎಗ ಕರ್ನಾಟಕದ ಎಲ್ಲಾ 28 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ.
ಚಿತ್ರದುರ್ಗ ಹಾಲಿ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ಸಹ ಈ ಬಾರಿ ಮತ್ತೊಮ್ಮೆ ಸ್ಪರ್ಧಿಸಲು ಸಿದ್ಧರಾಗಿದ್ದರು. ಇದರ ಜೊತೆಗೆ ನಾರಾಯಣ ಸ್ವಾಮಿ ಅವರಿಗೆ ಟಿಕೆಟ್ ನೀಡಲಾಗುತ್ತೆ ಎನ್ನುವ ಸುದ್ದಿ ಇತ್ತು. ಅಲ್ಲದೇ ಪ್ರಮುಖವಾಗಿ ಬಿಜೆಪಿಯಿಂದ ಮಾದಾರ ಚೆನ್ನಯ್ಯ ಸ್ವಾಮಿ ಅವರು ಈ ಬಾರಿ ಚಿತ್ರದುರ್ಗದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಇದೀಗ ಅಂತಿಮವಾಗಿ ಅಚ್ಚರಿ ಎಂಬಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿರಿಯ ನಾಯಕ ಬಾಗಲಕೋಟೆ ಮೂಲದ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಟಿಕೆಟ್ ನೀಡಲಾಗಿದೆ.
ಗೋವಿಂದ ಕಾರಜೋಳ ಅವರು ಬಾಗಲಕೋಟೆಯ ಮುಧೋಳ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ನ ಆರ್ಬಿ ತಿಮ್ಮಾಪುರ ಅವರ ವಿರುದ್ಧ ಸೋಲುಕಂಡಿದ್ದರು. ಹೀಗಾಗಿ ಅವರು ಈ ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಇಂಗಿತ ವ್ಯಕ್ತಪಡಿಸಿದ್ದರು. ಎಸ್ಸಿ ಮೀಸಲು ಕ್ಷೇತ್ರವಾಗಿರುವ ವಿಜಯಪುರದ ಟಕೆಟ್ ಈ ಬಾರಿ ಹಾಲಿ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಸಿಗುವುದು ಅನುಮಾನವಾಗಿತ್ತು.
ಈ ಹಿನ್ನೆಲೆಯಲ್ಲಿ ಗೋವಿಂದ ಕಾರಜೋಳ ಅವರು ವಿಜಯಪುರ ಟಿಕೆಟ್ಗಾಗಿ ಕಸರತ್ತು ನಡೆಸಿದ್ದರು. ಆದ್ರೆ, ಹೈಕಮಾಂಡ್ ಮತ್ತೊಮ್ಮೆ ವಿಜಯಪುರ ಟಿಕೆಟ್ ರಮೇಶ್ ಜಿಗಜಿಣಗೆ ಅವರಗೆ ನೀಡಿದ್ದು, ಇದೀಗ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಗೋವಿಂದ ಕಾರಜೋಳ ಅವರಿಗೆ ನೀಡಲಾಗಿದೆ. ಇನ್ನು ಕಾಂಗ್ರೆಸ್ನಿಂದ ಬಿಎನ್ ಚಂದ್ರಪ್ಪ ಕಣದಲ್ಲಿದ್ದಾರೆ. ಇದರಿಂದ ಎಸ್ಸಿ ಮೀಸಲ ಕ್ಷೇತ್ರವಾಗಿ ಚಿತ್ರದುರ್ಗದಲ್ಲಿ ಈ ಬಾರಿ ಗೋವಿಂದ್ ಕಾರಜೋಳ ಮತ್ತು ಚಂದ್ರಪ್ಪ ನಡುವೆ ಪೈಪೋಟಿ ನಡೆಯಲಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1