ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಒಳಿತಿಗಾಗಿ 840 ಕಿ.ಮೀ ಪಾದಯಾತ್ರೆ ಮಾಡಿದ ಅಯ್ಯಪ್ಪ ಸ್ವಾಮಿ ಭಕ್ತ ಬಸವರಾಜ್
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ. 27:
ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಒಳಿತಿಗಾಗಿ ಹಾಗೂ ಶೀಘ್ರ ಬಿಡುಗಡೆಗಾಗಿ ಅಯ್ಯಪ್ಪ ಸ್ವಾಮಿ ಭಕ್ತನೊಬ್ಬ ಸುಮಾರು 840 ಕಿಲೋಮೀಟರ್ ಪಾದಯಾತ್ರೆ ನಡೆಸಿ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಗಮನ ಸೆಳೆದಿದೆ.
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದ ನಿವಾಸಿ ಬಸವರಾಜ್ (ಕೊಕೊನಟ್) ಎಂಬವರು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸಿ ನವೆಂಬರ್ 29ರಂದು ಮೆದೇಹಳ್ಳಿ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಪಾದಯಾತ್ರೆ ಆರಂಭಿಸಿದರು. ನಿರಂತರ ಭಕ್ತಿ ಮತ್ತು ಸಂಕಲ್ಪದೊಂದಿಗೆ ಪಾದಯಾತ್ರೆ ನಡೆಸಿದ ಅವರು ಡಿಸೆಂಬರ್ 26ರಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನವನ್ನು ತಲುಪಿದರು.
ಶಾಸಕರ ಒಳಿತಿಗಾಗಿ, ಆರೋಗ್ಯ ಮತ್ತು ಸಂಕಷ್ಟ ನಿವಾರಣೆಗೆ ಅಯ್ಯಪ್ಪ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಬಸವರಾಜ್ ತಿಳಿಸಿದ್ದು, ಅವರ ಭಕ್ತಿ, ನಿಷ್ಠೆ ಹಾಗೂ ಸಂಕಲ್ಪಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Views: 127