
ಇಂದು ವಿಶಾಖಪಟ್ಟಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯ ಮುಂಬೈನಲ್ಲಿ ನಡೆದಿದ್ದು, ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಐದು ವಿಕೆಟ್‌ಗಳ ಜಯ ಸಾಧಿಸಿದೆ. ತಂಡದ ನಿಯಮಿತ ನಾಯಕ ರೋಹಿತ್ ಶರ್ಮಾ ವಿಶಾಖಪಟ್ಟಣಂ ಏಕದಿನ ಪಂದ್ಯಕ್ಕೆ ಮರಳುತ್ತಿದ್ದಾರೆ. ರೋಹಿತ್ ವಾಪಸಾತಿ ಎಂದರೆ ಇಶಾನ್ ಕಿಶನ್ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಮತ್ತೊಂದೆಡೆ, ಟೆಸ್ಟ್ ಸರಣಿಯ ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಜೀವಂತವಾಗಿರಿಸಲು ಹೋರಾಡಲಿದೆ.
Views: 0