
UPW vs DC Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್ ಪ್ರೀಮಿಯರ್ ಲೀಗ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಈಗಾಗಲೇ ಉಭಯ ತಂಡಗಳು ಪ್ಲೇಆಫ್ ಪ್ರವೇಶಿಸಿದರೂ ಈ ಪಂದ್ಯವು ಎರಡೂ ತಂಡಗಳಿಗೆ ತುಂಬಾ ಮಹತ್ವದ್ದು. ಅಂದರೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳಿಗೆ ನೇರವಾಗಿ ಫೈನಲ್ಗೆ ಪ್ರವೇಶಿಸಲು ಅವಕಾಶವಿದೆ.
ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ. ಇನ್ನು 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ನಡುವಣ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪೂನಂ ಯಾದವ್
ಯುಪಿ ವಾರಿಯರ್ಸ್ (ಪ್ಲೇಯಿಂಗ್ XI): ಶ್ವೇತಾ ಸೆಹ್ರಾವತ್, ಅಲಿಸ್ಸಾ ಹೀಲಿ (ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಪಾರ್ಶವಿ ಚೋಪ್ರಾ, ಅಂಜಲಿ ಸರ್ವಾಣಿ, ಸೊಪ್ಪದಂಡಿ ಯಶಸ್ರಿ, ಶಬ್ನಿಮ್ ಇಸ್ಮಾಯಿಲ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್, ಲಾರಾ ಹ್ಯಾರಿಸ್, ತಾರಾ ನಾರ್ರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ
ಯುಪಿ ವಾರಿಯರ್ಸ್ ತಂಡ: ದೇವಿಕಾ ವೈದ್ಯ, ಅಲಿಸ್ಸಾ ಹೀಲಿ(ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಅಂಜಲಿ ಸರ್ವಾಣಿ, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಲೌರೆನಿಮ್ ಇಸ್ಮಾಯಿಲ್, ಶಾಬ್ನಿಮ್ ಇಸ್ಮಾಯಿಲ್ , ಲಕ್ಷ್ಮಿ ಯಾದವ್, ಶ್ವೇತಾ ಸೆಹ್ರಾವತ್, ಸೊಪ್ಪದಂಡಿ ಯಶಸ್ರಿ.