India vs Australia 3rd ODI: ಇಬ್ಬರನ್ನು ಕೈಬಿಡುವ ಸಾಧ್ಯತೆ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಟ್ಟರೆ ಇಶಾನ್ ಕಿಶನ್​ಗೆ ಚಾನ್ಸ್ ಸಿಗಬಹುದು. ಹಾಗೆಯೇ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಬದಲಿಗೆ ಚೆನ್ನೈ ಮೂಲದ ಸ್ಪಿನ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಈ 2 ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬಹುದು. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...ರೋಹಿತ್ ಶರ್ಮಾಶುಭ್​ಮನ್ ಗಿಲ್ವಿರಾಟ್ ಕೊಹ್ಲಿಇಶಾನ್ ಕಿಶನ್ಕೆಎಲ್ ರಾಹುಲ್ಹಾರ್ದಿಕ್ ಪಾಂಡ್ಯರವೀಂದ್ರ ಜಡೇಜಾಮೊಹಮ್ಮದ್ ಸಿರಾಜ್ವಾಷಿಂಗ್ಟನ್ ಸುಂದರ್ಮೊಹಮ್ಮದ್ ಶಮಿಅಕ್ಷರ್ ಪಟೇಲ್ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

source https://tv9kannada.com/photo-gallery/cricket-photos/india-vs-australia-3rd-odi-predicted-india-playing-xi-zp-au50-540455.html

Views: 0

Leave a Reply

Your email address will not be published. Required fields are marked *