
ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿ ವಿಜೇತರಾಗುವುದರಿಂದ ಈ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತ ಗೆದ್ದಿತ್ತು. ಆದರೆ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಅದ್ಭುತವಾಗಿ ಆಡಿ, ಏಕಪಕ್ಷೀಯವಾಗಿ ಭಾರತವನ್ನು ಸೋಲಿಸುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತ್ತು. ಟೆಸ್ಟ್ ಸರಣಿ ಸೋತಿರುವ ಆಸ್ಟ್ರೇಲಿಯಾ ಕ್ಕೆ ಈ ಸರಣಿ ಮಹತ್ವದಾಗಿದ್ದು, ಈ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಇತ್ತ ರೋಹಿತ್ ಶರ್ಮಾ ಪಡೆ ಟೆಸ್ಟ್ ಸರಣಿಯೊಂದಿಗೆ ಏಕದಿನ ಸರಣಿಯನ್ನು ಬುಟ್ಟಿಗೆ ಹಾಕಿಕೊಳ್ಳುವ ಯೋಜನೆಯಲ್ಲಿದೆ.
Views: 0