
ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ನಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ. ಇಂದು ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಹಾಗೂ ಹರ್ಮನ್ಪ್ರೀತ್ ಕೌರ್ (Harmanpreet Kaur) ನೇತೃತ್ವದ ಮುಂಬೈ ಇಂಡಿಯನ್ಸ್ (DC vs MI) ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಎಲಿಮಿನೇಟರ್ನಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಸೋಲಿಸಿ ಮುಂಬೈ ಫೈನಲ್ಗೆ ಪ್ರವೇಶಿಸಿದರೆ, ಇತ್ತ ಡೆಲ್ಲಿ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರಿ ನೇರವಾಗಿ ಫೈನಲ್ಗೆ ಕ್ವಾಲಿಫೈ ಆಗಿತ್ತು. ಎರಡೂ ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು ಇಂದು ಮುಂಬೈನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯುವುದು ಖಚಿತ.
Views: 0