
ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಮಾರ್ಚ್.31): ಏಪ್ರಿಲ್ 1 ಮತ್ತು 2 ರಂದು ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.
ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಚಿತ್ರದುರ್ಗ ನಗರದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷೆ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಾಂಕದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಪೋನ್‍ಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.
The post ಗ್ರೂಪ್-ಸಿ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆ, ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/omAeG8b
via IFTTT
Views: 0