
16ನೇ ಆವೃತ್ತಿಯ ಐಪಿಎಲ್ಗೆ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಉಳಿದಿವೆ. 2008 ರಲ್ಲಿ ಪ್ರಾರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನ 16 ನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಹತ್ತು ತಂಡಗಳ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ಪೈಪೋಟಿ ನಡೆಸಲಿವೆ. ಈ ಪಂದ್ಯಕ್ಕೂ ಮುನ್ನ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಸಮಾರಂಭ ನಡೆಯಲ್ಲಿದೆ. ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ.
Views: 0