IPL 2023: ಈ ಸಲ ಕಪ್ ನಹೀ ಎಂದ RCB ನಾಯಕ ಫಾಫ್ ಡುಪ್ಲೆಸಿಸ್: ವಿಡಿಯೋ ವೈರಲ್

Ee Sala Cup Nahi’: Faf du Plessis misquotes RCB's motto

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಶುರುವಾಗಿದೆ. ಇದರ ಬೆನ್ನಲ್ಲೇ ಆರ್​ಸಿಬಿ ತಂಡದ ಘೋಷವಾಕ್ಯ ಕೂಡ ಮೊಳಗಲಾರಂಭಿಸಿದೆ. ಆರ್​ಸಿಬಿ (RCB) ತಂಡದ ಅಭಿಮಾನಿಗಳು ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ. ಆದರೆ ಆರ್​ಸಿಬಿ ನಾಯಕ ಮಾತ್ರ ಈ ಸಲ ಕಪ್ ಇಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೊದಲ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡದ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಈ ಸಂದರ್ಭದಲ್ಲಿ, ಆ್ಯಂಕರ್ ಫಾಫ್ ಡುಪ್ಲೆಸಿಯನ್ನು ಈ ಸಲ ಕಪ್ ನಮ್ದೆ’ ಎನ್ನಲು ಕೋರಿಕೊಂಡರು. ಆದರೆ ಡುಪ್ಲೆಸಿಸ್ ಕಪ್ ನಮ್ದೇ ಎನ್ನುವ ಬದಲು ಈ ಸಲ ಕಪ್ ನಹೀ ಎಂದರು.

ಆರ್​ಸಿಬಿ ನಾಯಕ ಬಾಯಿಯಿಂದಲೇ ಈ ಸಲ ಕಪ್ ನಹೀ ಎಂದು ಕೇಳುತ್ತಿದ್ದಂತೆ ಪಕ್ಕದಲ್ಲಿ ಕೂತಿದ್ದ ವಿರಾಟ್ ಕೊಹ್ಲಿ ನಗಲಾರಂಭಿಸಿದ್ದಾರೆ. ಅಲ್ಲದೆ ತಮ್ಮ ನಾಯಕನಿಗೆ ಹೇಳಿರುವ ತಪ್ಪಿನ ಬಗ್ಗೆ ತಿಳಿಸಿಕೊಟ್ಟರು.
ಇದೀಗ ಆರ್​ಸಿಬಿ ನಾಯಕ ಈ ಸಲ ಕಪ್ ನಹೀ ಎಂದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆರ್​ಸಿಬಿ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಮೊದಲ ಮುಖಾಮುಖಿ:

ಐಪಿಎಲ್​ನ 5ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಸಂಜೆ 7.30 ರಿಂದ ಶುರುವಾಗಲಿರುವ ಈ ಪಂದ್ಯದ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಉಭಯ ತಂಡಗಳು.

ಇದಾಗ್ಯೂ ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹ್ಯಾಝಲ್​ವುಡ್ ಹಾಗೂ ವನಿಂದು ಹಸರಂಗ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಹಸರಂಗ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿದ್ದು, ಹೀಗಾಗಿ ಅವರು ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ವಿಳಂಬವಾಗಲಿದೆ.

ಮತ್ತೊಂದೆಡೆ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಇನ್ನೂ ಕೂಡ ಆರ್​ಸಿಬಿ ತಂಡವನ್ನು ಸೇರಿಕೊಂಡಿಲ್ಲ. ಹೀಗಾಗಿ ಅವರು ಕೂಡ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯರಿರುವುದಿಲ್ಲ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

ಇದನ್ನೂ ಓದಿ: IPL 2023: 2 ವರ್ಷದಿಂದ RCB ತಂಡದಲ್ಲಿದ್ದರೂ ಒಂದೇ ಒಂದು ಚಾನ್ಸ್​ ನೀಡಿಲ್ಲ..!

ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಜೋಫ್ರಾ ಆರ್ಚರ್, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಾಲ್, ಕ್ಯಾಮರೋನ್ ಗ್ರೀನ್, ಜ್ಯೆ ರಿಚರ್ಡ್ಸನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಸಂದೀಪ್ ವಾರಿಯರ್.

 

 

source https://tv9kannada.com/sports/cricket-news/ee-sala-cup-nahi-faf-du-plessis-misquotes-rcbs-motto-kannada-news-zp-au50-547398.html

Views: 0

Leave a Reply

Your email address will not be published. Required fields are marked *