IPL 2023: RCB ತಂಡದಲ್ಲಿ 1 ಬದಲಾವಣೆ ಖಚಿತ: ಹೀಗಿರಲಿದೆ ಪ್ಲೇಯಿಂಗ್ 11

IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇದೀಗ 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಗುರುವಾರ (ಏ.6) ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ (RCB vs KKR) ತಂಡವನ್ನು ಎದುರಿಸಲಿದೆ.ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಎಡಗೈ ವೇಗಿ ರೀಸ್ ಟೋಪ್ಲಿ ಈ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.ಮುಂಬೈ ಇಂಡಿಯನ್ಸ್ ವಿರುದ್ಧ ಫೀಲ್ಡಿಂಗ್ ಮಾಡುವ ವೇಳೆ ರೀಸ್ ಟೋಪ್ಲಿ ಅವರ ಭುಜಕ್ಕೆ ಗಾಯವಾಗಿತ್ತು. ಗಾಯವು ಗಂಭೀರವಲ್ಲದಿದ್ದರೂ, ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಟೋಪ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಕನ್​ಫರ್ಮ್​ ಆಗಿದೆ.ಇನ್ನು ರೀಸ್ ಟೋಪ್ಲಿ ಹೊರಗುಳಿದರೆ ಮತ್ತೋರ್ವ ಎಡಗೈ ವೇಗಿ ಡೇವಿಡ್ ವಿಲ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಬಹುದು. ಈ ಒಂದು ಬದಲಾವಣೆಯೊಂದಿಗೆ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...
1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಗ್ಲೆನ್ ಮ್ಯಾಕ್ಸ್​ವೆಲ್ (ಆಲ್​ರೌಂಡರ್)4- ಮೈಕಲ್ ಬ್ರೇಸ್​ವೆಲ್ (ಆಲ್​ರೌಂಡರ್)5- ಶಹಬಾಝ್ ಅಹ್ಮದ್ (ಆಲ್​ರೌಂಡರ್)6- ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)7- ಕರ್ಣ್ ಶರ್ಮಾ 8- ಹರ್ಷಲ್ ಪಟೇಲ್9- ಆಕಾಶ್ ದೀಪ್ 10- ಡೇವಿಡ್ ವಿಲ್ಲಿ11- ಮೊಹಮ್ಮದ್ ಸಿರಾಜ್RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

source https://tv9kannada.com/photo-gallery/cricket-photos/ipl-2023-rcb-playing-xi-vs-kkr-kannada-news-zp-au50-549785.html

Leave a Reply

Your email address will not be published. Required fields are marked *