Wayne Parnell: ಹೀನಾಯ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡಕ್ಕೆ ದ. ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಎಂಟ್ರಿ

ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ ಜಯ ಸಾಧಿಸಿ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭರ್ಜರಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಇದೀಗ ಈ ಸೋಲಿನ ಮಧ್ಯೆ ಆರ್​ಸಿಬಿ ತಂಡಕ್ಕೆ ಹೊಸ ಆಟಗಾರನ ಎಂಟ್ರಿ ಆಗಿದೆ.ಗಾಯದ ಸಮಸ್ಯೆಯಿಂದ ಐಪಿಎಲ್ 2023 ಟೂರ್ನಿಯಿಂದ ಹೊರಬಿದ್ದಿರುವ ಆರ್​ಸಿಬಿ ವೇಗಿ ರಿಸೆ ಟೋಪ್ಲೆ ಜಾಗಕ್ಕೆ ದಕ್ಷಿಣ ಆಫ್ರಿಕಾದ ಮಾರಕ ಬೌಲರ್ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಆರ್​ಸಿಬಿ ಖಚಿತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳಿಂದ ವೇಯ್ನ್ ಪಾರ್ನೆಲ್ ಅವರು ಆರ್​ಸಿಬಿ ಫ್ರಾಂಚೈಸಿ ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಬೌಲರ್ ವೇಯ್ನ್ ಪಾರ್ನೆಲ್, 2009 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಒಟ್ಟು 56 ಅಂತರರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ಅನುಭವ ಇವರಿಗಿದ್ದು 59 ವಿಕೆಟ್ ಕಿತ್ತಿದ್ದಾರೆ.ಐಪಿಎಲ್​ನಲ್ಲೂ ವೇಯ್ನ್ ಪಾರ್ನೆಲ್ ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್, ಪುಣೆ ವಾರಿಯರ್ಸ್ ಪರ ಕಣಕ್ಕಿಳಿದಿದ್ದಾರೆ. 26 ಐಪಿಎಲ್ ಪಂದ್ಯಗಳನ್ನು ಆಡಿದ್ದು 26 ವಿಕೆಟ್ ಪಡೆದಿದ್ದಾರೆ. 27 ರನ್ ನೀಡಿ 3 ವಿಕೆಟ್ ಪಡೆದಿರುವುದು ಇವರ ಶ್ರೇಷ್ಠ ಸಾಧನೆ ಆಗಿದೆ.ಟೂರ್ನಿಯಿಂದ ಹೊರಬಿದ್ದಿರುವ ಇಂಗ್ಲೆಂಡ್​ ತಂಡದ ವೇಗಿ ರಿಸೆ ಟೋಪ್ಲೆಯನ್ನು ಆರ್​ಸಿಬಿ ಐಪಿಎಲ್ 2023 ಮಿನಿ ಹರಾಜಿನಲ್ಲಿ 1.9 ಕೋಟಿಗೆ ಖರೀದಿಸಿತ್ತು. ಮುಂಬೈ ವಿರುದ್ಧದ ಪ್ರಥಮ ಪಂದ್ಯದಲ್ಲಿ ಫೀಲ್ಡಿಂಗ್​ ಮಾಡುವಾಗ ರಿಸೆ ಬಲ ಭುಜದ ಗಾಯಕ್ಕೆ ತುತ್ತಾಗಿದ್ದು, ಸದ್ಯ ಅವರು ಬ್ರಿಟನ್​ಗೆ ತಲುಪಿದ್ದಾರೆ.ಈಗಾಗಲೇ ಆರ್​ಸಿಬಿ ತಂಡ ಇಂಜುರಿಯಿಂದ ಬಳಲುತ್ತಿದೆ. ವಿಲ್ ಜಾಕ್ವೆಸ್ ಮತ್ತು ರಜತ್ ಪಟಿದಾರ್ ಗಾಯದ ಸಮಸ್ಯೆದಿಂದ ಹೊರಗುಳಿದಿದ್ದಾರೆ. ಹೀಗಾಗಿ ಆರ್​ಸಿಬಿ ಒಟ್ಟು ಮೂವರು ಆಟಗಾರರನ್ನು ಕಳೆದುಕೊಂಡಿದೆ.ಇನ್ನು ಆರ್​ಸಿಬಿ ತಂಡದ ಪ್ರಮುಖ ಬೌಲಿಂಗ್ ಬಲವಾಗಿರುವ ಜೋಶ್ ಹ್ಯಾಜಲ್‌ವುಡ್ ಮತ್ತು ವನಿಂದು ಹಸರಂಗ ಕ್ರಮವಾಗಿ ಏಪ್ರಿಲ್ 10 ಮತ್ತು ಏಪ್ರಿಲ್ 15 ರಂದು ತಂಡವನ್ನು ಸೇರುವ ನಿರೀಕ್ಷೆಯಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 10 ರಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಇದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

source https://tv9kannada.com/photo-gallery/cricket-photos/rcb-have-signed-south-african-pacer-wayne-parnel-as-injured-reece-topleys-replacement-for-ipl-2023-vb-au48-550972.html

Views: 0

Leave a Reply

Your email address will not be published. Required fields are marked *