

6ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು 18ನೇ ಪಂದ್ಯ ನಡೆಯುತ್ತಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಈ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮುಖಾಮುಖಿಯಾಗುತ್ತಿವೆ. ಲೀಗ್‌ನಲ್ಲಿ ಉಭಯ ತಂಡಗಳು ಇದುವರೆಗೆ ತಲಾ 3 ಪಂದ್ಯಗಳನ್ನು ಆಡಿದ್ದು, ಎರಡೂ ತಂಡಗಳು 3 ಪಂದ್ಯಗಳಲ್ಲಿ 2 ರಲ್ಲಿ ಗೆದ್ದು 1 ರಲ್ಲಿ ಸೋತಿವೆ. ಆದರೆ, ಗುಜರಾತ್ ಪಂಜಾಬ್ಗಿಂತ ಉತ್ತಮ ನಿವ್ವಳ ರನ್ ರೇಟ್ ಹೊಂದಿದ್ದು, ಅದಕ್ಕಾಗಿಯೇ 4 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಅದೇ ಅಂಕಗಳೊಂದಿಗೆ ಪಂಜಾಬ್ ಆರನೇ ಸ್ಥಾನದಲ್ಲಿದೆ.