IPL 2023: RCB ತಂಡದಲ್ಲಿ 1 ಬದಲಾವಣೆ ಖಚಿತ: ಆಡುವ ಬಳಗದಲ್ಲಿ ಯಾರಿಗೆ ಸಿಗಲಿದೆ ಚಾನ್ಸ್?

RCB Playing XI vs DC: ಐಪಿಎಲ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ.ಏಕೆಂದರೆ ಮೊದಲ ಮೂರು ಪಂಧ್ಯಗಳಿಂದ ಹೊರಗುಳಿದಿದ್ದ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ ಆಲ್​ರೌಂಡರ್ ವನಿಂದು ಹಸರಂಗ ತಂಡಕ್ಕೆ ಮರಳಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.ಆದರೆ ಇಲ್ಲಿ ಹಸರಂಗ ಬದಲಿಗೆ ಯಾರು ಹೊರಗುಳಿಯಲಿದ್ದಾರೆ ಎಂಬುದೇ ಪ್ರಶ್ನೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​​ವೆಲ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರು. ಹೀಗಾಗಿ ಇಬ್ಬರು ಬೌಲರ್​ಗಳಲ್ಲಿ ಒಬ್ಬರನ್ನು ಕೈ ಬಿಡಬೇಕಾಗುತ್ತದೆ.ಅದರಂತೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಡೇವಿಡ್ ವಿಲ್ಲಿ ಅಥವಾ ವೇಯ್ನ್ ಪಾರ್ನೆಲ್ ಇವರಿಬ್ಬರಲ್ಲಿ ಒಬ್ಬರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇಲ್ಲಿ ವಿಲ್ಲಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ಅವರ ಬದಲು ಹಸರಂಗ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...1- ಫಾಫ್ ಡುಪ್ಲೆಸಿಸ್ (ನಾಯಕ)2- ವಿರಾಟ್ ಕೊಹ್ಲಿ3- ಮಹಿಪಾಲ್ ಲೊಮ್ರೋರ್4- ಗ್ಲೆನ್ ಮ್ಯಾಕ್ಸ್​ವೆಲ್ (ಆಲ್​ರೌಂಡರ್)5- ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)6- ಅನೂಜ್ ರಾವತ್ 7- ವನಿಂದು ಹಸರಂಗ8- ಶಹಬಾಝ್ ಅಹ್ಮದ್9- ಹರ್ಷಲ್ ಪಟೇಲ್10- ಮೊಹಮ್ಮದ್ ಸಿರಾಜ್11- ವೇಯ್ನ್ ಪಾರ್ನೆಲ್RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

source https://tv9kannada.com/photo-gallery/cricket-photos/rcb-playing-xi-vs-dc-wanindu-hasaranga-return-to-rcb-playing-11-kannada-news-zp-au50-555502.html

Leave a Reply

Your email address will not be published. Required fields are marked *