RCB vs DC, IPL 2023: ನಾಳೆ ಆರ್​ಸಿಬಿ ಪಂದ್ಯ: ಚಿನ್ನಸ್ವಾಮಿಯಲ್ಲಿ ಕೊಹ್ಲಿ, ವನಿಂದು ಹಸರಂಗ ಭರ್ಜರಿ ಅಭ್ಯಾಸ

ಇಂಡಿಯನ್ ಪ್ರೀಮಿಯರ್ ಲೀಗ್​ 2023 ರೋಚಕ ಘಟ್ಟದತ್ತ ಸಾಗುತ್ತಿದೆ. ಪ್ರತಿಯೊಂದು ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುತ್ತಿದೆ. ಇಂದು ಕೋಲ್ಕತ್ತಾ ಮತ್ತು ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗುತ್ತಿದೆ. ನಾಳೆ (ಏ. 14) ಐಪಿಎಲ್​ನಲ್ಲಿ ಬಹುನಿರೀಕ್ಷಿತ ಪಂದ್ಯ ಆಯೋಜಿಸಲಾಗಿದೆ.ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.ಡೆಲ್ಲಿ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ಭರ್ಜರಿ ತಯಾರಿ ನಡೆಸುತ್ತಿದೆ. ಚಿನ್ನಸ್ವಾಮಿಯಲ್ಲಿ ಫಾಫ್ ಪಡೆ ಬ್ಯಾಟಿಂಗ್ - ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.ಸ್ಟಾರ್ ಸ್ಪಿನ್ನರ್ ವನಿಂದು ಹಸರಂಗ ಆರ್​ಸಿಬಿ ತಂಡ ಸೇರಿಕೊಂಡಿದ್ದು ಬೌಲಿಂಗ್ ವಿಭಾಗಕ್ಕೆ ಆನೆಬಲ ಬಂದಂತಾಗಿದೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದ ಕಾರಣ ಶ್ರೀಲಂಕಾ ಸ್ಪಿನ್ನರ್ ಐಪಿಎಲ್‌ನಲ್ಲಿ ಮೊದಲ ಮೂರು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು.ಚಿನ್ನಸ್ವಾಮಿಯಲ್ಲಿ ವನಿಂದು ಹಸರಂಗ ಭರ್ಜರಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.ಇನ್ನು ಪ್ರತಿ ಬಾರಿಯಂತೆ ಈ ಸಲವೂ ಆರ್​ಸಿಬಿ ಗೋ ಗ್ರೀನ್ ಅಭಿಯಾನಕ್ಕೆ ಬೆಂಬಲ ನೀಡುತ್ತಿದೆ. ಅದರಂತೆ ಹಸಿರು ಜೆರ್ಸಿಯಲ್ಲಿ ಒಂದು ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಆರ್‌ಸಿಬಿ ಏಪ್ರಿಲ್ 23 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.ಐಪಿಎಲ್ 2023ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಆರ್​ಸಿಬಿ ತಂಡಕ್ಕೆ ಬೌಲಿಂಗ್ ಸಮಸ್ಯೆಯೇ ದೊಡ್ಡ ಸಮಸ್ಯೆಯಾಗಿದೆ.

source https://tv9kannada.com/photo-gallery/cricket-photos/wanindu-hasaranga-and-virat-kohli-practicing-in-chinnaswami-for-rcb-vs-dc-ipl-2023-match-kannada-news-vb-au48-555703.html

Leave a Reply

Your email address will not be published. Required fields are marked *