IPL 2023 Points Table: ಒಂದು ಸ್ಥಾನ ಮೇಲೆಕ್ಕೇರಿದ ಜಿಟಿ: ಐಪಿಎಲ್ 2023 ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್ ಮಾಹಿತಿ ಇಲ್ಲಿದೆ

IPL 2023 Points Table: ಒಂದು ಸ್ಥಾನ ಮೇಲೆಕ್ಕೇರಿದ ಜಿಟಿ: ಐಪಿಎಲ್ 2023 ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್ ಮಾಹಿತಿ ಇಲ್ಲಿದೆ
gujarat titans

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 18 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಗುರುವಾರ ಐಪಿಎಲ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (PBKS vs GT) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿ, ಕೊನೆಯ ಒಂದು ಎಸೆತ ಬಾಕಿ ಇರುವಾಗ ಜಯ ಸಾಧಿಸಿತು. ಇದೀಗ ಪಂಜಾಬ್ ಹಾಗೂ ಗುಜರಾತ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಆಟ ಪ್ರದರ್ಶಿಸುತ್ತಿದ್ದು ಟೇಬಲ್ ಟಾಪ್​ನಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು, ಒಂದು ಸೋಲುಂಡು ಆರ್​ಆರ್​ ಅಗ್ರಸ್ಥಾನದಲ್ಲಿದೆ. +1.588 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಆರ್​ಸಿಬಿ ವಿರುದ್ಧ ರೋಚಕ ಜಯ ಸಾಧಿಸಿದ ಲಖನೌ ಸೂಪರ್ ಜೇಂಟ್ಸ್ ತಂಡ ಎರಡನೇ ಸ್ಥಾನದಲ್ಲಿದೆ. +1.048 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಗುಜರಾತ್ ಟೈಟಾನ್ಸ್ ತಂಡ ಪಂಜಾಬ್ ವಿರುದ್ಧ ಜಯ ಸಾಧಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದು ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು, ಒಂದು ಸೋಲುಂಡು +0.341 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಂದು ಸ್ಥಾನ ಕುಸಿದು ನಾಲ್ಕನೇ ಪ್ಲೇಸ್​ನಲ್ಲಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು +1.375 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಆಡಿದ ನಾಲ್ಕು ಪಂದ್ಯಗಳಲ್ಲಿ ತಲಾ ಎರಡರಲ್ಲಿ ಜಯ- ಸೋಲು ಕಾಣುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಸ್ಥಾನದಲ್ಲಿದೆ. +0.225 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಕೂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಸೋಲು ಹಾಗೂ ಎರಡರಲ್ಲಿ ಜಯ ಕಂಡು 4 ಅಂಕ ಹೊಂದಿ -0.226ರನ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಸೋಲು ಒಂದು ಗೆಲುವು ಕಂಡು 2 ಅಂಕ ಸಂಪಾದಿಸಿ -0.800 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಎಂಟನೆ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡು ಸೋಲು, ಒಂದು ಗೆಲುವು ಕಂಡು 2 ಅಂಕ ಸಂಪಾದಿಸಿ -0.879 ರನ್​ರೇಟ್ ಹೊಂದಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೆ ಸ್ಥಾನದಲ್ಲಿದೆ. ಆಡಿದ ಮೂರು ಪಂದ್ಯದಲ್ಲಿ ಎರಡರಲ್ಲೂ ಸೋಲು ಒಂದರಲ್ಲಿ ಜಯ ಕಂಡು 1 ಅಂಕ ಸಂಪಾದಿಸಿ -1.502 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ನಾಲ್ಕು ಪಂದ್ಯಗಳಲ್ಲೂ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.576 ರನ್​ರೇಟ್ ಹೊಂದಿದೆ.

IPL 2023: 27 ಎಸೆತ, 6 ಸಿಕ್ಸ್​, 2 ಫೋರ್: ಐಪಿಎಲ್​ನಲ್ಲಿ ಡೇಂಜರಸ್​ ಧೋನಿಯ ಆರ್ಭಟ

ಆರೆಂಜ್ ಕ್ಯಾಪ್:

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡು ಅರ್ಧಶತಕ ಸಿಡಿಸಿ ಒಟ್ಟು 233 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಡೆಲ್ಲಿ ನಾಯಕ ಡೇವಿಡ್ ವಾರ್ನರ್ 209 ರನ್ ಕಲೆಹಾಕಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ತೃತೀಯ ಸ್ಥಾನಕ್ಕೆ ಜಿಗಿದಿದ್ದಾರೆ. ಇವರು ನಾಲ್ಕು ಪಂದ್ಯಗಳಲ್ಲಿ 204 ರನ್ ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್:

ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಹಲ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಿಂದ 10 ವಿಕೆಟ್ ಕಬಳಿಸಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ ನಾಲ್ಕು ಪಂದ್ಯಗಳಿಂದ ಒಟ್ಟು 9 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ. ಲಖನೌ ಸೂಪರ್ ಜೇಂಟ್ಸ್ ತಂಡದ ಮಾರ್ಕ್ ವುಡ್ ಮೂರನೇ ಸ್ಥಾನದಲ್ಲಿದ್ದು ಆಡಿರುವ ಮೂರು ಪಂದ್ಯಗಳಲ್ಲಿ 9 ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/gujarat-titans-in-3rd-place-in-ipl-2023-points-table-check-orange-and-purple-cap-sports-news-in-kannada-vb-au48-555767.html

Leave a Reply

Your email address will not be published. Required fields are marked *