ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.14:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮತದಾನದ ಬಗ್ಗೆ ಅರಿವು ಮೂಡಿಸಲು ಇದೇ ಏಪ್ರಿಲ್ 18ರಂದು ಬೆಳಿಗ್ಗೆ 9.30ಕ್ಕೆ ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ವಿಕಲಚೇತನರಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಬೈಕ್ ರ್ಯಾಲಿಯು ಚಿತ್ರದುರ್ಗ ನಗರದ ಮದಕರಿ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ರ್ಯಾಲಿ ನಡೆಯಲಿದೆ.
ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಎಂ.ಸಿ.ಸಿ ನೋಡೆಲ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ಏಪ್ರಿಲ್ 18 ರಂದು ಮತದಾನ ಜಾಗೃತಿಗೆ ವಿಕಲಚೇತನರ ಬೈಕ್ ರ್ಯಾಲಿ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/34zh7uc
via IFTTT