IPL 2023: LSG vs CSK ಪಂದ್ಯದ ವೇಳಾಪಟ್ಟಿ ಬದಲಾವಣೆ

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಭರದಿಂದ ಸಾಗುತ್ತಿದೆ. ಈ ಬಾರಿ ಬಹುತೇಕ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬರುತ್ತಿದೆ. ಈಗಾಗಲೇ ಎಲ್ಲಾ ತಂಡಗಳ 5 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಯಾವುದೇ ತಂಡ ಸೌರ್ವಭೌಮತ್ವ ಸಾಧಿಸಿಲ್ಲ. ಅಂದರೆ ಎಲ್ಲಾ ತಂಡಗಳು ಸೋಲು-ಗೆಲುವುಗಳನ್ನು ಕಾಣುತ್ತಿದೆ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ.
ಪ್ರಸ್ತುತ ಪಾಯಿಂಟ್ಸ್​ ಟೇಬಲ್​ (ಏ.19) ನಲ್ಲಿ ರಾಜಸ್ಥಾನ್ ರಾಯಲ್ಸ್​ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ ದ್ವಿತೀಯ ಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್​ ತಂಡ. ಇಲ್ಲಿ 2ನೇ ಹಾಗೂ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮೇ.4 ರಂದು ಮುಖಾಮುಖಿಯಾಗಬೇಕಿತ್ತು.ಆದರೀಗ ಈ ಪಂದ್ಯವನ್ನು ಮೇ 3 ರಂದು ನಡೆಸಲು ತೀರ್ಮಾನಿಸಲಾಗಿದೆ. ಮೇ. 4 ರಂದು ಲಕ್ನೋ ಮಹಾನಗರದ ಪಾಲಿಕೆ ಚುನಾವಣೆ ನಡೆಯಲಿದ್ದು, ಹೀಗಾಗಿ ಅಂದು ರಾತ್ರಿ ನಡೆಯಬೇಕಿದ್ದ ಪಂದ್ಯವನ್ನು ಮೇ 3 ರಂದು ನಡೆಸಲು ನಿರ್ಧರಿಸಲಾಗಿದೆ. ಅದರಂತೆ  ಮೇ 3ರಂದು ಲಕ್ನೋದ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ಸಿಎಸ್​ಕೆ-ಎಲ್​ಎಸ್​ಜಿ ಪಂದ್ಯ ನಡೆಯಲಿದೆ.ಇನ್ನು ಉಭಯ ತಂಡಗಳೂ ಬಲಿಷ್ಠವಾಗಿರುವ ಕಾರಣ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದೆ.ಮತ್ತೊಂದೆಡೆ ಎಂಎಸ್ ಧೋನಿ ಸಾರಥ್ಯದ ಸಿಎಸ್​ಕೆ ತಂಡ ಕೂಡ 5 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು, ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್​ ರೇಟ್​ನಲ್ಲಿ ಮುಂಚೂಣಿಯಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಪಾಯಿಂಟ್ಸ್​ ಟೇಬಲ್​​ನಲ್ಲಿ 2ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಗೆದ್ದರೆ ಸಿಎಸ್​ಕೆ ಅಂಕ ಪಟ್ಟಿಯಲ್ಲಿ ಮೇಲೇರಬಹುದು.

source https://tv9kannada.com/photo-gallery/cricket-photos/ipl-2023-lsg-vs-csk-match-shifted-to-may-3-kannada-news-zp-au50-559365.html

Leave a Reply

Your email address will not be published. Required fields are marked *