
ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಏ.19) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ನಾಳೆ(ಏ.20 ರ ಗುರುವಾರ) ತಾಲ್ಲೂಕು ಕಚೇರಿಯಲ್ಲಿ ಅಪಾರ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಮನ್ಸುಕ್ ಮಾಂಡ್ವಿಯ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಸೇರಿದಂತೆ ಇನ್ನು ಅನೇಕರು ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ರಸ್ತೆಯಲ್ಲಿರುವ ನಿವಾಸದಿಂದ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿರವರು ಮೆರವಣಿಗೆ ಹೊರಡಲಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಮನವಿ ಮಾಡಿದ್ದಾರೆ.
The post ನಾಳೆ ಜಿ.ಹೆಚ್.ತಿಪ್ಪಾರೆಡ್ಡಿ ನಾಮಪತ್ರ ಸಲ್ಲಿಕೆ : ಕೇಂದ್ರ ಸಚಿವರು ಸಾಥ್ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/ZfOVQ5G
via IFTTT