IPL 2023: RCB ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕ: ಕಾರಣವೇನು?

IPL 2023: ಮೊಹಾಲಿಯಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯಕರಾಗಿ ಕಣಕ್ಕಿಳಿದಿದ್ದಾರೆ. 2013 ರಿಂದ 2021 ರವರೆಗೆ ಆರ್​ಸಿಬಿ  ನಾಯಕರಾಗಿ ಕಾಣಿಸಿಕೊಂಡಿದ್ದ ಕೊಹ್ಲಿ ಮತ್ತೆ ತಂಡದ ಸಾರಥ್ಯವಹಿಸಲು ಮುಖ್ಯ ಕಾರಣ ಫಾಫ್ ಡುಪ್ಲೆಸಿಸ್​ ಅವರ ಗಾಯದ ಸಮಸ್ಯೆ.ಹೌದು, ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಡುಪ್ಲೆಸಿಸ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಾರೆ.ಅಂದರೆ ಫೀಲ್ಡಿಂಗ್ ಮಾಡಲು ಸಂಪೂರ್ಣ ಫಿಟ್​ ಆಗಿರ ಕಾರಣ ಡುಪ್ಲೆಸಿಸ್ ಬ್ಯಾಟಿಂಗ್ ಮುಗಿದ ಬಳಿಕ ಹೊರಗುಳಿಯಲಿದ್ದಾರೆ. ಅವರ ಬದಲಿಗೆ ಮತ್ತೋರ್ವ ಬೌಲರ್​ ಕಣಕ್ಕಿಳಿಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ಫಾಫ್ ಡುಪ್ಲೆಸಿಸ್ ಸಂಪೂರ್ಣವಾಗಿ ಚೇತರಿಸಿಕೊಂಡರೆ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಈ ಪಂದ್ಯದಲ್ಲೂ ಸ್ಯಾಮ್​ ಕರನ್ ಮುನ್ನಡೆಸುತ್ತಿದ್ದಾರೆ.
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್(ನಾಯಕ), ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್

source https://tv9kannada.com/photo-gallery/cricket-photos/ipl-2023-virat-kohli-captain-rcb-in-match-against-pbks-kannada-news-zp-au50-560030.html

Leave a Reply

Your email address will not be published. Required fields are marked *