Skip to content
  • Sunday, March 22, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • PBKS vs RCB, IPL 2023: ಆರ್​ಸಿಬಿ-ಪಂಜಾಬ್ ಕಿಂಗ್ಸ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Sports

PBKS vs RCB, IPL 2023: ಆರ್​ಸಿಬಿ-ಪಂಜಾಬ್ ಕಿಂಗ್ಸ್ ಪಂದ್ಯದ ರೋಚಕ ಫೋಟೋಗಳು ಇಲ್ಲಿದೆ ನೋಡಿ

April 21, 2023
samagrasuddi

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಪ್ರದರ್ಶನ ತೋರಿ ಗೆಲುವಿನ ಲಯಕ್ಕೆ ಮರಳಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಬೆಂಗಳೂರು 24 ರನ್​ಗಳ ಜಯ ಸಾಧಿಸಿತು.ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್​ಸಿಬಿ ತಂಡದ ನಾಯತ್ವದ ಜವಾಬ್ದಾರಿ ಹೊತ್ತಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ಓಪನರ್​ಗಳಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬರೋಬ್ಬರಿ 137 ರನ್​ಗಳ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.ಕೊಹ್ಲಿ 47 ಎಸೆತಗಳಿಂದ 5 ಬೌಂಡರಿ ಮತ್ತು 1 ಸಿಕ್ಸರ್​ ಮೂಲಕ 59 ರನ್​ ಗಳಿಸಿದರೆ, ಡುಪ್ಲೆಸಿಸ್​ ಕೇವಲ 56 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಮೂಲಕ 84 ರನ್​ ಗಳಿಸಿ ರಿಟಾರ್ಡ್ ಆದರು. ಆರ್​ಸಿಬಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 174 ರನ್ ಗಳಿಸಿತು.ಸವಾಲಿನ ಟಾರ್ಗೆಟ್ ಬೆನ್ನತ್ತಿದ ಪಂಜಾಬ್​ ಆರಂಭಿಕ ಆಘಾತ ಎದುರಿಸಿತು. ಅಥರ್ವ 4 ರನ್​ ಗಳಿಸಿ ಔಟಾದರೆ, ಮ್ಯಾಥ್ಯೂ ಶಾರ್ಟ್ 8, ಲಿಯಾಮ್ ಲಿವಿಂಗ್​ಸ್ಟೋನ್ 2, ಹರ್ಪ್ರೀತ್ ಸಿಂಗ್ 13, ನಾಯಕ ಸ್ಯಾಮ್ ಕುರ್ರನ್ 10 ರನ್ ಹೀಗೆ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು.ಪ್ರಭ್​ ಸಿಮ್ರಾನ್​ ಸಿಂಗ್​ 30 ಎಸೆತದಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್​ ಮೂಲಕ 46 ರನ್​​ ಗಳಿಸಿದರೆ ಜಿತೇಶ್ ಶರ್ಮ 27 ಎಸೆತದಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್​ ಮೂಲಕ 41 ರನ್ ಪೇರಿಸಿದರು. ಆದರೆ, 18.2 ಓವರ್​ಗಳಲ್ಲಿ 150 ರನ್​ಗೆ ಆಲೌಟ್ ಆಗುವ ಮೂಲಕ ಸೋಲುಂಡಿತು.ಬೆಂಗಳೂರು ಪರ ಮೊಹಮ್ಮದ್​​ ಸಿರಾಜ್​ 21 ರನ್​​ ನೀಡಿ 4 ವಿಕೆಟ್​​ ಪಡೆದರೆ, ವನಿಂದು ಹಸರಂಗ 39 ರನ್​​ ನೀಡಿ 2 ವಿಕೆಟ್​ ಪಡೆದರು. ವಿಜಯ್​ಕುಮಾರ್​ ವೈಶಾಖ್​ ಮತ್ತು ಹರ್ಷಲ್​ ಪಟೇಲ್​​ ತಲಾ 1 ವಿಕೆಟ್​​ ಕಿತ್ತು ಮಿಂಚಿದರು.ಪಂದ್ಯ ಮುಗಿದ ಬಳಿಕ ಪಂಜಾಬ್ ಕಿಂಗ್ಸ್ ಮಾಲಕಿ ಜೊತೆ ಮಾತುಕತೆ ನಡೆಸುತ್ತಿರುವ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್.

source https://tv9kannada.com/photo-gallery/cricket-photos/rcb-vs-pbks-ipl-2023-here-is-the-photos-of-punjab-kings-and-royal-challengers-bangalore-ipl-2023-match-vb-au48-560449.html

Post navigation

Twitter Blue Tick: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರ ಟ್ವಟ್ಟರ್ ಖಾತೆಯಿಂದ ಬ್ಲೂ ಟಿಕ್ ಮಾಯ
Virat Kohli: ಡುಪ್ಲೆಸಿಸ್​ಗೆ ಮಾರಕ ನೋ ಬಾಲ್ ಎಸೆದ ಸ್ಯಾಮ್ ಕುರ್ರನ್​ಗೆ ಹೊಡೆಯಲು ಮುಂದಾದ ವಿರಾಟ್ ಕೊಹ್ಲಿ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.4 | ದಿನ 76

March 19, 2026
samagrasuddi
  • ಚಿತ್ರದುರ್ಗ: ಮಾ. 23ರಂದು ಉಜ್ಜಯಿನಿ ಮಠದಲ್ಲಿ ಜಗದ್ಗುರು ಶ್ರೀ ಮರುಳಾರಾಧ್ಯ ಶಿವಾಚಾರ್ಯರ 31ನೇ ಪುಣ್ಯ ಸ್ಮರಣೋತ್ಸವ.
  • Life Cycle Mutual Funds: ಸೆಬಿಯ ಹೊಸ ಮ್ಯೂಚುವಲ್ ಫಂಡ್ ನಿಯಮ, ಲಾಭ ಮತ್ತು ಅನಾನುಕೂಲಗಳ ಸಂಪೂರ್ಣ ಮಾಹಿತಿ.
  • RCB Ticket Scam Alert: ಐಪಿಎಲ್ ಟಿಕೆಟ್ ಹೆಸರಿನಲ್ಲಿ ವಂಚನೆ; ಬೆಂಗ್ಳೂರು ಪೊಲೀಸರಿಂದ ಹೈ-ಅಲರ್ಟ್!
  • ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.
  • ​Day Special, ಮಾರ್ಚ್ 22: ಇತಿಹಾಸದ ಪುಟಗಳಲ್ಲಿನ ಸುವರ್ಣ ಅಕ್ಷರಗಳು ಮತ್ತು ವಿಶ್ವ ಜಲ ದಿನದ ವಿಶೇಷತೆ
Copyright © 2026
CONTACT US
Theme by: Theme Horse
Proudly Powered by: WordPress