Virat Kohli Record: ಫೀಲ್ಡಿಂಗ್​ ಮೂಲಕವೇ ಹೊಸ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್​ನಲ್ಲಿ ವಿಫಲರಾಗಿದ್ದರು. ಮೊದಲ ಎಸೆತದಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದ ಕಿಂಗ್ ಕೊಹ್ಲಿ ಆ ಬಳಿಕ ಫೀಲ್ಡಿಂಗ್ ಮೂಲಕ ದಾಖಲೆ ಬರೆದಿದ್ದು ವಿಶೇಷ.ಈ ಪಂದ್ಯದಲ್ಲಿ ಡೇವಿಡ್ ವಿಲ್ಲಿ ಎಸೆತದಲ್ಲಿ ದೇವದತ್ ಪಡಿಕ್ಕಲ್ ಭರ್ಜರಿ ಹೊಡೆತಕ್ಕೆ ಯತ್ನಿಸಿದ್ದರು. ಆದರೆ ಬೌಂಡರಿ ಲೈನ್​ನಲ್ಲಿ ಅತ್ಯುತ್ತವಾಗಿ ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು.ಹೌದು, ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ಪರ 100 ಕ್ಯಾಚ್​ಗಳನ್ನು ಹಿಡಿದ ಏಕೈಕ ಆಟಗಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಅಲ್ಲದೆ ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ 2ನೇ ಭಾರತೀಯ ಹಾಗೂ 3ನೇ ಆಟಗಾರ ಎನಿಸಿಕೊಂಡಿದ್ದಾರೆ.ಅಂದರೆ ಐಪಿಎಲ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. 204 ಇನಿಂಗ್ಸ್​ಗಳಲ್ಲಿ ರೈನಾ ಒಟ್ಟು 109 ಕ್ಯಾಚ್​ಗಳನ್ನು ಹಿಡಿದು ಇತಿಹಾಸ ನಿರ್ಮಿಸಿಟ್ಟಿದ್ದಾರೆ.ಹಾಗೆಯೇ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕೀರನ್ ಪೊಲಾರ್ಡ್ ಇದ್ದು, ವಿಂಡೀಸ್ ಆಟಗಾರ 189 ಐಪಿಎಲ್ ಇನಿಂಗ್ಸ್​ಗಳಲ್ಲಿ 103 ಕ್ಯಾಚ್​ಗಳನ್ನು ಹಿಡಿದಿದ್ದಾರೆ.ಇದೀಗ 228 ಇನಿಂಗ್ಸ್​ಗಳಲ್ಲಿ 101 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.ವಿಶೇಷ ಎಂದರೆ ಈ ಮೂವರನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಫೀಲ್ಡರ್ ಐಪಿಎಲ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದಿಲ್ಲ. ಹೀಗಾಗಿಯೇ ಸುರೇಶ್ ರೈನಾ, ಕೀರನ್ ಪೊಲಾರ್ಡ್ ಹಾಗೂ ವಿರಾಟ್ ಕೊಹ್ಲಿಯನ್ನು ಐಪಿಎಲ್​ನ ಅತ್ಯುತ್ತಮ ಕ್ಷೇತ್ರರಕ್ಷಕರೆಂದು ಬಣ್ಣಿಸಲಾಗುತ್ತದೆ.

source https://tv9kannada.com/photo-gallery/cricket-photos/ipl-2023-virat-kohli-completes-100-catches-in-ipl-kannada-news-zp-au50-562189.html

Views: 0

Leave a Reply

Your email address will not be published. Required fields are marked *