

ಐಪಿಎಲ್ 37ನೇ ಪಂದ್ಯದಲ್ಲಿಂದು ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ರಾಜಸ್ಥಾನ್ನ ಜೈಪುರ್ನಲ್ಲಿರುವ ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ. ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆದ್ದಿರುವ ಚೆನ್ನೈ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ರೆ, 7ರಲ್ಲಿ 4 ಪಂದ್ಯ ಗೆದ್ದಿರುವ ರಾಜಸ್ಥಾನ್ 3ನೇ ಸ್ಥಾನದಲ್ಲಿದೆ.