Skip to content
  • Monday, March 23, 2026
  • ABOUT US
  • CONTACT US
  • PRIVACY POLICY

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • PRIVACY POLICY
  • Horoscope
  • Home
  • Sports
  • IPL 2023: ಸ್ಟಾರ್ ಆಲ್​ರೌಂಡರ್​ ತಂಡದಲ್ಲಿದ್ದರೂ ಕಣಕ್ಕಿಳಿಸದ RCB
Sports

IPL 2023: ಸ್ಟಾರ್ ಆಲ್​ರೌಂಡರ್​ ತಂಡದಲ್ಲಿದ್ದರೂ ಕಣಕ್ಕಿಳಿಸದ RCB

April 27, 2023
samagrasuddi

IPL 2023: RCB ತಂಡವು ಐಪಿಎಲ್​ನಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ, ನಾಲ್ಕು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇಲ್ಲಿ ಆರ್​ಸಿಬಿ ಸೋಲಿಗೆ ಮುಖ್ಯ ಕಾರಣವಾಗಿರುವುದು ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ.ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಮಿಡಲ್ ಆರ್ಡರ್ ಬ್ಯಾಟರ್​ಗಳು ಕಲೆಹಾಕಿದ ರನ್​ಗಳು.ಇಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಮಹಿಪಾಲ್ ಲೋಮ್ರೊರ್ ಇದುವರೆಗೆ ಕೇವಲ 75 ರನ್​ ಕಲೆಹಾಕಿದರೆ, ಫಿನಿಶರ್ ಎನಿಸಿಕೊಂಡಿರುವ ದಿನೇಶ್ ಕಾರ್ತಿಕ್ ಇದುವರೆಗೆ 83 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ ಆಲ್​ರೌಂಡರ್​ ಶಹಬಾಝ್ ಅಹ್ಮದ್ ಕೇವಲ 42 ರನ್ ಗಳಿಸಿದ್ದಾರೆ. ಇನ್ನು  ಸುಯಶ್ ಪ್ರಭುದೇಸಾಯಿ ಇದುವರೆಗೆ ಕಲೆಹಾಕಿರುವುದು ಕೇವಲ 29 ರನ್ ಮಾತ್ರ. ಇದಲ್ಲದೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದಿರುವ ಅನೂಜ್ ರಾವತ್ 3 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 16 ರನ್ ಅಷ್ಟೇ. ಇನ್ನು 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವನಿಂದು ಹಸರಂಗ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ. ಏಕೆಂದರೆ ಹಸರಂಗ ಬೌಲಿಂಗ್​ನಲ್ಲಿ 6 ವಿಕೆಟ್ ಪಡೆದರೆ, ಬ್ಯಾಟಿಂಗ್​ನಲ್ಲಿ ಕೇವಲ 13 ರನ್​ ಮಾತ್ರ ಕಲೆಹಾಕಿದ್ದಾರೆ. ಅಂದರೆ ಆಲ್​ರೌಂಡರ್ ಪ್ರದರ್ಶನ ನೀಡುವಲ್ಲಿ ಲಂಕಾ ಸ್ಪಿನ್ನರ್ ಸಂಪೂರ್ಣ ವಿಫಲರಾಗಿದ್ದಾರೆ ಎನ್ನಬಹುದು.ಇತ್ತ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಬಲ್ಲ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಇದ್ದರೂ ಆರ್​ಸಿಬಿ ಅವಕಾಶ ನೀಡಿಲ್ಲ ಎಂಬುದೇ ಅಚ್ಚರಿ. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ಬ್ರೇಸ್​ವೆಲ್ 2 ವಿಕೆಟ್ ಪಡೆದಿದ್ದರು. ಅಲ್ಲದೆ ಒಂದು ಬಾರಿ ಬ್ಯಾಟ್ ಬೀಸಿ 19 ರನ್​ ಗಳಿಸಿದ್ದರು.ಆದರೆ ವನಿಂದು ಹಸರಂಗ ಆಗಮನದ ಬೆನ್ನಲ್ಲೇ ಮೈಕೆಲ್ ಬ್ರೇಸ್​ವೆಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಯಿತು. ಇತ್ತ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸತತ ವೈಫಲ್ಯ ಹೊಂದುತ್ತಿದ್ದರೂ, ಅತ್ಯುತ್ತಮ ಸ್ಪೋಟಕ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಬ್ರೇಸ್​ವೆಲ್​ಗೆ ಮಾತ್ರ ಅವಕಾಶ ನೀಡಿರಲಿಲ್ಲ.ಅದರಲ್ಲೂ ಚಿನ್ನಸ್ವಾಮಿ ಮೈದಾನವು ಬ್ಯಾಟ್ಸ್​ಮನ್​ಗಳ ಸ್ವರ್ಗ. ಇಲ್ಲೂ ಕೂಡ ಆರ್​ಸಿಬಿ ವನಿಂದು ಹಸರಂಗ ಹಾಗೂ ಡೇವಿಡ್ ವಿಲ್ಲಿಯನ್ನು ಕಣಕ್ಕಿಳಿಸಿ ಹೊಡಿಬಡಿ ದಾಂಡಿಗ ಎನಿಸಿಕೊಂಡಿರುವ ಬ್ರೇಸ್​ವೆಲ್​ರನ್ನು ಹೊರಗಿಟ್ಟಿರುವುದೇ ಅಚ್ಚರಿ.ಇಲ್ಲಿ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗುತ್ತಿದ್ದ ಕಾರಣ ಬ್ಯಾಟಿಂಗ್ ಆಲ್​ರೌಂಡರ್ ಎನಿಸಿಕೊಂಡಿರುವ ಬ್ರೇಸ್​ವೆಲ್ ಉತ್ತಮ ಆಯ್ಕೆಯಾಗಿದ್ದರು. ಅಲ್ಲದೆ ಅವರನ್ನು ಪಾರ್ಟ್ ಟೈಮ್ ಬೌಲರ್ ಆಗಿಯೂ ಕೂಡ ಬಳಸಿಕೊಳ್ಳಬಹುದಿತ್ತು. ಅಷ್ಟೇ ಅಲ್ಲದೆ ಮ್ಯಾಕ್ಸ್​ವೆಲ್ ಅವರನ್ನು ಸಹ ಹೆಚ್ಚುವರಿ ಸ್ಪಿನ್ನರ್ ಆಗಿ ಬಳಸಿಕೊಳ್ಳುವ ಉತ್ತಮ ಅವಕಾಶವಿತ್ತು.ಇದಾಗ್ಯೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಇಬ್ಬರು ಬೌಲಿಂಗ್ ಆಲ್​ರೌಂಡರ್​ಗಳನ್ನು ಕಣಕ್ಕಿಳಿಸಿ ಚೇಸಿಂಗ್​ಗೆ ಮುಂದಾಗಿರುವುದೇ ಅಚ್ಚರಿ. ಒಟ್ಟಿನಲ್ಲಿ ಮೈಕೆಲ್ ಬ್ರೇಸ್​ವೆಲ್​ನಂತಹ ಸ್ಪೋಟಕ ಬ್ಯಾಟರ್ ತಂಡದಲ್ಲಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಸರಿಯಾಗಿ ಬಳಸಿಕೊಳ್ಳದಿರುವುದು ವಿಪರ್ಯಾಸವೇ ಸರಿ.

source https://tv9kannada.com/photo-gallery/cricket-photos/ipl-2023-michael-bracewell-good-option-for-rcb-kannada-news-zp-au50-565129.html

Post navigation

IPL 2023: RCB ಪ್ಲೇಯಿಂಗ್​ 11 ಬದಲಿಸದಿರಲು ಇದುವೇ ಅಸಲಿ ಕಾರಣ..!
IPL 2023: RCB ಕಪ್​ ಗೆಲ್ಲೋ ತನಕ ಸ್ಕೂಲ್​ಗೆ ಸೇರಲ್ಲ: ಆಗಿದ್ರೆ ಈ ಜನ್ಮದಲ್ಲಿ ಶಾಲೆಗೆ ಹೋಗಲ್ಲ ಎಂದು ಕಿಚಾಯಿಸಿದ ನೆಟ್ಟಿಗರು

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress