ಬೆಳಿಗ್ಗೆ ಈ ವಸ್ತುಗಳನ್ನು ಸೇವಿಸಿದರೆ ಕರಗುವುದು ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಲೆಸ್ಟ್ರಾಲ್

Cholesterol Control Tips : ಕೊಲೆಸ್ಟ್ರಾಲ್ ಹೃದಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಹೃದಯಾಘಾತದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಕೆಲವು ಮನೆಮದ್ದುಗಳ ಸಹಾಯದಿಂದ, ರಕ್ತನಾಳಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕಬಹುದು.

Cholesterol Control Tips : ರಕ್ತನಾಳಗಳಲ್ಲಿ ಸಂಗ್ರಹವಾಗುವ ಕೊಲೆಸ್ಟ್ರಾಲ್ ಹೃದಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳಿಗೆ ಕಾರಣವಾಗುತ್ತದೆ. ಕೊಲೆಸ್ಟ್ರಾಲ್ ಶೇಖರಣೆಯಿಂದಾಗಿ, ಇಡೀ ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ. ಇದರಿಂದಾಗಿ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ಅಷ್ಟೇ ಅಲ್ಲ, ಹೃದಯಾಘಾತದಂತಹ ಗಂಭೀರ ಕಾಯಿಲೆಗಳಿಗೂ ಇದು ಕಾರಣವಾಗುತ್ತದೆ. ಆದರೆ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು. ಆಹಾರದಲ್ಲಿ ಈ ವಸ್ತುಗಳನ್ನು ಸೇವಿಸುವ ಮೂಲಕ 
ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. 

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು  ಹೇಗೆ?
ರಕ್ತನಾಳಗಳಿಂದ ಕೊಲೆಸ್ಟ್ರಾಲ್ಅನ್ನು ತೆಗೆದುಹಾಕಲು, ಆಹಾರದತ್ತ ಗಮನ ಹರಿಸುವುದು ಬಹಳ ಮುಖ್ಯ. ಉತ್ತಮ ಆಹಾರದ ಮೂಲಕ ದೇಹದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸಿ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.  ರಕ್ತನಾಳಗಳಲ್ಲಿ ಹೆಪ್ಪುಗಟ್ಟಿದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು, ಪ್ರತಿದಿನ ಬೆಳಿಗ್ಗೆ ಉಪಹಾರದಲ್ಲಿ ಈ ಕೆಳಗಿನ ವಸ್ತುಗಳನ್ನು ಆಹಾರವಾಗಿ ಸೇವಿಸಬೇಕು. 

ಕೊಲೆಸ್ಟ್ರಾಲ್ ನಿಯಂತ್ರಿಸುವ ಆಹಾರ : 
 ಒಣದ್ರಾಕ್ಷಿ  : 
ಫೈಬರ್, ಪ್ರೋಟೀನ್, ಕಾರ್ಬೋಹೈಡ್ರೇಟ್‌, ವಿಟಮಿನ್‌ಗಳು ಮತ್ತು ಪೊಟ್ಯಾಸಿಯಮ್, ಕ್ಯಾಲ್ಸಿಯಂನಂತಹ ಖನಿಜಗಳು ಒಣದ್ರಾಕ್ಷಿಗಳಲ್ಲಿ ಹೇರಳವಾಗಿ ಕಂಡುಬರುತ್ತವೆ. ಇದು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಒಣದ್ರಾಕ್ಷಿಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವ ಫೈಟೊಕೆಮಿಕಲ್‌ಗಳು ಮತ್ತು ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತವೆ.

ಬಾದಾಮಿ :
ವಿಟಮಿನ್ ಇ, ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಬಾದಾಮಿಯಲ್ಲಿ ಕಂಡುಬರುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. 

ಮೆಂತ್ಯೆ : 
ಮೆಂತ್ಯೆ ಔಷಧೀಯ ಗುಣಗಳಿಂದ ಕೂಡಿದೆ. ಮೆಂತ್ಯೆ ಸೇವನೆಯು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಅಲ್ಲದೆ, ಟ್ರೈಗ್ಲಿಸರೈಡ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ಆಗುತ್ತದೆ. ಫೋಲಿಕ್ ಆಮ್ಲ, ರೈಬೋಫ್ಲಾವಿನ್, ಫೋಲಿಕ್ ಆಮ್ಲದಂತಹ ಪೋಷಕಾಂಶಗಳು ಮತ್ತು ಕಬ್ಬಿಣ, ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್‌ನಂತಹ ಖನಿಜಗಳು ಮೆಂತ್ಯೆಯಲ್ಲಿ  ಕಂಡುಬರುತ್ತವೆ. 

ಸೂರ್ಯಕಾಂತಿ ಬೀಜಗಳು : 
ಸೂರ್ಯಕಾಂತಿ ಬೀಜಗಳು ಅನೇಕ ಔಷಧೀಯ ಗುಣಗಳನ್ನು ಹೊಂದಿವೆ. ಅದಕ್ಕಾಗಿಯೇ ಕೆಲವೊಮ್ಮೆ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಆಹಾರದಲ್ಲಿ ಸೋಯಾಬೀನ್ ಬದಲಿಗೆ ಸೂರ್ಯಕಾಂತಿ ಎಣ್ಣೆಯನ್ನು ಬಳಸಲು ಸಲಹೆ ನೀಡಲಾಗುತ್ತದೆ. ಉರಿಯೂತ ನಿವಾರಕ ಅಂಶಗಳು ಇದರಲ್ಲಿ ಕಂಡುಬರುತ್ತವೆ. 

ಅಗಸೆ ಬೀಜಗಳು : 
ಉತ್ತಮ ಪ್ರಮಾಣದ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಆಂಟಿ-ಆಕ್ಸಿಡೆಂಟ್‌ಗಳು ಅಗಸೆಬೀಜದಲ್ಲಿ ಕಂಡುಬರುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ.

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಸಮಗ್ರ ಸುದ್ದಿ ಅದನ್ನು ಖಚಿತಪಡಿಸುವುದಿಲ್ಲ.)

Source: https://zeenews.india.com/kannada/health/consume-these-food-in-the-morning-to-control-cholesterol-131530

Leave a Reply

Your email address will not be published. Required fields are marked *