ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಏ.28) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸರ್ಕಾರದಿಂದ ಯಾವುದೇ ಅನುದಾನ ನೀಡಬಾರದೆಂದು ಕೀಳಾಗಿ ಮಾತನಾಡಿರುವ ಸಿ.ಪಿ.ಯೋಗೇಶ್ವರ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಚುನಾವಣಾಧಿಕಾರಿಗೆ ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿ.ಪಿ.ಯೋಗೇಶ್ವರ್ ಪರಿಶಿಷ್ಟ ಜಾತಿ ಮತ್ತು ವರ್ಗದವರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಅವಹೇಳನವಾಗಿ ಮಾತನಾಡಿರುವುದಲ್ಲದೆ ಸರ್ಕಾರದಿಂದ ನೀಡುತ್ತಿರುವ ಅನುದಾನವನ್ನು ನಿಲ್ಲಿಸುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರು ಉದ್ದಾರವಾದರೆ ಬಿಜೆಪಿ. ಓಟು ಹಾಕುವುದಿಲ್ಲವೆಂದು ಖಾಸಗಿ ಟಿ.ವಿ.ಚಾನಲ್‍ನಲ್ಲಿ ಮಾತನಾಡಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಿ.ಪಿ.ಯೋಗೇಶ್ವರ್‍ರವರನ್ನು ಅಭ್ಯರ್ಥಿ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಹನುಮಂತಪ್ಪ ದುರ್ಗ ಆಗ್ರಹಿಸಿದರು.
ದೇವರಾಜ್, ನ್ಯಾಯವಾದಿ ಡಿ.ವೆಂಕಟೇಶ್, ಓ.ಸೋಮಣ್ಣ, ವಿಜಯ್‍ಕುಮಾರ್, ಟಿ.ಚಂದ್ರಪ್ಪ, ಟಿ.ನಾಗರಾಜ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‍ಕುಮಾರ್, ಟಿ.ಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.
The post ಸಿ.ಪಿ.ಯೋಗೇಶ್ವರ್ ವಿರುದ್ದ ಕ್ರಮಕ್ಕೆ ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗ ಒತ್ತಾಯ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/jU4ufDd
via IFTTT