

DC vs SRH, IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಉಭಯ ತಂಡಗಳು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನಗಳಲ್ಲಿದ್ದು, ಹೀಗಾಗಿ ಈ ಪಂದ್ಯವು ಎರಡೂ ತಂಡಗಳಿಗೆ ತುಂಬಾ ಮಹತ್ವದ್ದು. ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 10ನೇ ಸ್ಥಾನ ಅಲಂಕರಿಸಿದರೆ, ಸನ್ರೈಸರ್ಸ್ ಹೈದರಾಬಾದ್ 9ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್(ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಅನ್ರಿಕ್ ನೋಕಿಯಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಲುಂಗಿ ಎನ್ಗಿಡಿ, ಮುಸ್ತಾಫಿಜುರ್ ರೆಹಮಾನ್, ಪ್ರವೀಣ್ ದುಬೆ, ಖಲೀಲ್ ಅಹ್ಮದ್, ರೋವ್ಮನ್ ಪೊವೆಲ್, ಪ್ರಿಯಮ್ ಗರ್ಗ್, ಪೃಥ್ವಿ ಶಾ, ಲಲಿತ್ ಯಾದವ್, ಚೇತನ್ ಸಕರಿಯಾ, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್, ರಿಲೀ ರೋಸ್ಸೌವ್
ಸನ್ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಹ್ಯಾರಿ ಬ್ರೂಕ್, ಏಡೆನ್ ಮಾರ್ಕ್ರಾಮ್(ನಾಯಕ), ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ರಾಹುಲ್ ತ್ರಿಪಾಠಿ, ಆದಿಲ್ ರಶೀದ್, ಅಕೇಲ್ ಹೊಸೀನ್, ಗ್ಲೆನ್ ಹೊಸೈನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.