ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಕೆ

 

 

ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿವೆ.

19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ₹ 171.50 ಕಡಿತಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಮಾರಾಟದ ಪರಿಷ್ಕೃತ ಬೆಲೆ ಈಗ ₹ 1,856.50 ಆಗಿದ್ದರೆ, ಮುಂಬೈನಲ್ಲಿ ₹ 1,808,  ಕೋಲ್ಕತ್ತಾದಲ್ಲಿ, ₹ 1,960.50,  ಚೆನ್ನೈನಲ್ಲಿ  ₹ 2,021 ಆಗಿರುತ್ತದೆ.

ಗೃಹಬಳಕೆಯ LPG ಸಿಲಿಂಡರ್‌ಗಳಿಗೆ ಹೋಲಿಸಿದರೆ, ವಾಣಿಜ್ಯ ಅನಿಲದ ಬೆಲೆಗಳು ಹೆಚ್ಚು ಏರಿಳಿತಗೊಳ್ಳುತ್ತವೆ. ಕಳೆದ ತಿಂಗಳು , 2024 ರ ಆರ್ಥಿಕ ವರ್ಷದ ಮೊದಲ ದಿನದಂದು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ದರವನ್ನು ₹ 92 ರಷ್ಟು ಕಡಿತಗೊಳಿಸಲಾಯಿತು.

ಮಾರ್ಚ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು  ₹ 350.50 ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ₹ 50 ರಷ್ಟು ಹೆಚ್ಚಿಸಲಾಗಿತ್ತು.  ಜನವರಿಯಲ್ಲಿ ₹ 25 ರಷ್ಟು ಹೆಚ್ಚಿಸಲಾಗಿತ್ತು .

2022 ರಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ನಾಲ್ಕು ಬಾರಿ ಹೆಚ್ಚಿಸಲಾಗಿತ್ತು ಮತ್ತು ಮೂರು ಬಾರಿ ಇಳಿಕೆ ಮಾಡಲಾಗಿತ್ತು.

ಕಳೆದ ವರ್ಷ ಸೆಪ್ಟೆಂಬರ್ 1ರಂದು ವಾಣಿಜ್ಯ ಸಿಲಿಂಡರ್‌ಗಳ ಬೆಲೆ ₹ 91.50 ಇಳಿಕೆಯಾಗಿದ್ದರೆ , ಆಗಸ್ಟ್‌ನಲ್ಲಿ ₹ 36 ಇಳಿಕೆಯಾಗಿತ್ತು . ಜುಲೈನಲ್ಲಿ ₹ 8.5ರಷ್ಟು ಕಡಿತಗೊಳಿಸಲಾಗಿತ್ತು.

The post ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಇಳಿಕೆ first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/8I3vNc0
via IFTTT

Leave a Reply

Your email address will not be published. Required fields are marked *