

ಐಪಿಎಲ್ನ 48 ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಕದನ ನಡೆಯುತ್ತಿದೆ. ಜೈಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉಭಯ ತಂಡಗಳು ಹಿಂದಿನ ಪಂದ್ಯದಲ್ಲಿ ಸೋತು ಬರುತ್ತಿವೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ರಾಜಸ್ಥಾನ ಸೋಲನುಭವಿಸಿತ್ತು. ಮತ್ತೊಂದೆಡೆ, ಗುಜರಾತ್ ಟೈಟಾನ್ಸ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ಶಾಕ್ ನೀಡಿತ್ತು. ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳುವ ಭರವಸೆಯಲ್ಲಿ ಕಣಕ್ಕಿಳಿದಿವೆ.